ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಪ್ರಭುದೇವ. ಸಂದೇಶ್ ಪ್ರೊಡಕ್ಷನ್ಸ್ ನಿಂದ ನಿರ್ಮಾಣ..
ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಮತ್ತೊಂದು ಅದ್ದೂರಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗುತ್ತಿದೆ. ಬಹುಭಾಷಾ ನಟ, ಇಂಡಿಯನ್ ಮೈಕಲ್ ಜಾಕ್ಸನ್ ಅಂತಲೇ ಪ್ರಸಿದ್ದರಾಗಿರುವ ಪ್ರಭುದೇವ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಕೃಷ್ಣ ಸೇರಿದಂತೆ ಸಾಕಷ್ಟು ಖ್ಯಾತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.
ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುತ್ತಿರುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ. ಇದು ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯ 31 ನೇ ಚಿತ್ರ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬರಲಿದೆ.
ವಿನಿ ವೆಂಕಟೇಶ್ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಜುಲೈ 5 ರಿಂದ ಆರಂಭವಾಗಲಿದೆ. ಅಂಡಮಾನ್, ನಿಕೋಬಾರ್, ಬೆಂಗಳೂರು, ಚೆನ್ನೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಅಂಬರೀಶನ್ ಈ ನೂತನ ಸಂಗೀತ ನೀಡಲಿದ್ದಾರೆ. ಶೀರ್ಷಿಕೆ ಅನಾವರಣ ಸದ್ಯದಲ್ಲೇ ನಡೆಯಲಿದೆ