Sandalwood Leading OnlineMedia

ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ “ಮಾಫಿಯಾ” ಚಿತ್ರತಂಡದಿ0ದ ಸ್ಪೆಶಲ್ ಗಿಫ್ಟ್!

 

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶನದ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಮಾಫಿಯಾ” ಚಿತ್ರತಂಡದಿಂದ ಟೀಸರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ “ಮಾಫಿಯಾ” ಚಿತ್ರತಂಡ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ ಬರಲಿದೆ.

 

ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆಅನೂಪ್ ಸೀಳಿನ್ ಹಾಗೂ ಗಗನ್ ಬಡೇರಿಯಾ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

 

Share this post:

Related Posts

To Subscribe to our News Letter.

Translate »