ಬಹುಭಾಷಾ ನಟಿ, ಕನ್ನಡತಿ ಪ್ರಣಿತಾ ಸುಭಾಷ್ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ.
ಕನ್ನಡ ಮಾತ್ರವಲ್ಲದೆ ಕಾಲಿವುಡ್, ಟಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲೂ ಬಣ್ಣ ಹಚ್ಚಿ ಮಿಂಚಿದ್ದಾರೆ. ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಗಂಡನ ಜೊತೆ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.
ಪ್ರಣಿತಾ ಸುಭಾಷ್ ಉದ್ಯಮಿ ನಿತಿನ್ ರಾಜು ಜೊತೆಗೆ ಕಳೆದ ವರ್ಷ ಮೇ ತಿಂಗಳಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟರು. ಲವ್ ಕಮ್ ಅರೆಂಜ್ ಮ್ಯಾರೇಜ್ ಆಗಿದ್ದ ಪ್ರಣಿತಾ ಮದುವೆ ಬಳಿಕ ಸಿನಿಮಾದಲ್ಲಿ ನಟಿಸುವುದನ್ನು ನಿಲ್ಲಿಸಿದ್ದರು. ಇತ್ತೀಚಿಗಷ್ಟೇ ಹಿಂದೂ ಸಂಪ್ರಾದಾಯದಂತೆ ಅದ್ದೂರಿಯಾಗಿ ಸೀಮಂತ ಕಾರ್ಯ ಮಾಡಲಾಗಿದೆ. ಇತ್ತೀಚೆಗೆ ಅವರು ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಆ ಫೋಟೋಗಳು ವೈರಲ್ ಆಗಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನು ಪ್ರಣೀತಾ ತಮ್ಮದೇ ಆದ ಫೌಂಡೇಶನ್ ಮಾಡಿಕೊಂಡು ಅದರ ಮೂಲಕ ಸಮಾಜ ಸೇವೆ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುತ್ತಿದ್ದಾರೆ. ಜೊತೆಗೆ ಲಾಕ್ಡೌನ್ನಲ್ಲಿ ಸಮಯದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ಆಹಾರ ಹಾಗೂ ದಿನಸಿ ಕಿಟ್ಗಳನ್ನು ನೀಡುವ ಮೂಲಕ ಜನರ ಕಷ್ಟಕ್ಕೆ ನೆರವಾಗಿದ್ದರು.
ಇನ್ನೂ ಪ್ರಾಣಿ ಪ್ರೇಮಿಯಾಗಿರುವ ಪ್ರಣೀತಾ ಅನಾಥ ಪ್ರಾಣಿಗಳನ್ನು ದತ್ತು ಪಡೆಯುವಂತೆಯೂ ಸಾಕಷ್ಟು ಮಂದಿಗೆ ಪೋತ್ಸಾಹ ನೀಡಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ವಿವಷಯಗಳು ಹಾಗೂ ರಾಜಕೀಯ ಬೆಳವಣಿಗೆಗೆಳ ಬಗ್ಗೆಯೂ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾದಾಗಲೂ ಪ್ರಣೀತಾ ಈ ಬಗ್ಗೆ ಸಾಕಷ್ಟು ಟ್ವೀಟ್ ಮಾಡಿದ್ದರು.
ಪೋಟೋ ನೋಡಿದ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಸದ್ಯ ನಟಿ ಪ್ರಣಿತಾ ಶೇರ್ ಮಾಡಿದ ಪೋಟೊಗಳು ಆನ್ಲೈನ್ನಲ್ಲಿ ಸಖತ್ ವೈರಲ್ ಆಗುತ್ತಿದೆ