Sandalwood Leading OnlineMedia

ಮುಂದಿನ ವಾರ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಒಳ್ಳೆ ಹುಡುಗ ಪ್ರಥಮ್

ಬಿಗ್ ಬಾಸ್ ಖ್ಯಾತಿಯ ನಟ ಒಳ್ಳೆ ಹುಡುಗ ಪ್ರಥಮ್ ಮುಂದಿನ ವಾರ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.ಕೆಲವು ಸಮಯದ ಹಿಂದೆ ಮನೆಯವರೇ ನೋಡಿ ನಿಶ್ಚಯಿಸಿದ ಭಾನುಶ್ರೀ ಎಂಬ ಯುವತಿಯ ಜೊತೆ ಪ್ರಥಮ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಮದುವೆ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ ಪುಷ್ಪ 2 ಬಗ್ಗೆ ಅಪ್ ಡೇಟ್ ಕೊಟ್ಟ ಅಲ್ಲು ಅರ್ಜುನ್

ಮುಂದಿನ ವಾರ ಮದುವೆ. ಅಲ್ಲೇ ಬಂದು ಆಶೀರ್ವಾದ ಮಾಡ್ಬೇಕೂಂತೇನೂ ಇಲ್ಲ. ಕರೆಯೋಕೆ ಸಂಭ್ರಮವೂ ಇಲ್ಲ. ಇನ್ವಿಟೇಷನ್ ತಲುಪಿಸುವುದೇ ಹರಸಾಹಸ. ಹಾಗಂತ ಸುಮ್ಮನೆ ಫಾರ್ವರ್ಡ್ ಮೆಸೇಜ್ ಹಾಕಿ ನಿಮ್ಮನ್ನು ಮದುವೆಗೆ ಕಾಟಾಚಾರಕ್ಕೆ ಕರೆಯಲ್ಲ. ಈಗ ಎಲ್ಲಿರ್ತೀರೋ ಅಲ್ಲಿಂದಲೇ ಹಾರೈಸಿ. ಗ್ರ್ಯಾಂಡ್ ಆಗಿ ಆಗಬಹುದಿತ್ತು. ಆದರೆ ನನಗೆ ಆಸಕ್ತಿಯಿಲ್ಲ. ಸರಳವಾಗಿ ಆಗ್ತಿರೋ ಕಾರಣ ನೀವು ಇದ್ದಲ್ಲಿಯೇ ಹಾರೈಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ.

Share this post:

Related Posts

To Subscribe to our News Letter.

Translate »