Sandalwood Leading OnlineMedia

ಚೇಫ್ ಆದ ದಿಯಾ ಪೃಥ್ವಿ ಅಂಬಾರ್..ಬಂತು ‘ಜೂನಿ’ ಕ್ಯಾರೆಕ್ಟರ್ ಟೀಸರ್ ’ಜೂನಿ’ ಕ್ಯಾರೆಕ್ಟರ್ ಟೀಸರ್ ಅನಾವರಣ..ಚೇಫ್ ಆದ ಪೃಥ್ವಿ ಅಂಬಾರ್..

’ದಿಯಾ’ ಫ್ಲೇವರ್ ನಲ್ಲಿ ಜೂನಿ ಕ್ಯಾರೆಕ್ಟರ್ ಟೀಸರ್…ಚೇಫ್ ಆದ ಪೃಥ್ವಿ ಅಂಬಾರ್..ಫೆ.9ಕ್ಕೆ ಸಿನಿಮಾ ರಿಲೀಸ್ ಸ್ಯಾಂಡವುಲ್‌ನಲ್ಲಿ ದಿಯಾ ಅನ್ನುವ ಸಿನಿಮಾ ಬಂದಿತ್ತು. ಈ ಚಿತ್ರದ ನಾಯಕ ಪೃಥ್ವಿ ಅಂಬಾರ್ ಅದ್ಭುತವಾಗಿಯೇ ಅಭಿನಯಿಸಿದ್ದರು. ಇದೀಗ ಅಂತಹದ್ದೆ ಪ್ರೇಮಕಥೆಯ ಹೊತ್ತುಬಂದಿರುವ ಜೂನಿ ಕ್ಯಾರೆಕ್ಟರ್ ಟೀಸರ್ ಅನಾವರಣಗೊಂಡಿದೆ. ಜೂನಿ ಕ್ಯಾರೆಕ್ಟರ್ ಟೀಸರ್ ದಿಯಾ ಸಿನಿಮಾ ಫ್ಲೇವರ್ ಕೊಡುತ್ತಿದೆ. ಚೇಫ್ ಅವತಾರದಲ್ಲಿ ಪೃಥ್ವಿ ಕಾಣಿಸಿಕೊಂಡಿದ್ದಾರೆ. ಸಖತ್ ಇಂಪ್ರೆಸಿವ್ ಆಗಿದೆ ಕ್ಯಾರೆಕ್ಟರ್ ಟೀಸರ್..

ಇದನ್ನೂ ಓದಿ ಜಸ್ಟ್‌ ಪಾಸ್ ಚಿತ್ರತಂಡಕ್ಕೆ ಕಾಟೇರನ ಬಲ,ಜಸ್ಟ್ ಪಾಸ್ ಚಿತ್ರದ ಮೊದಲ ವಿಡಿಯೋ ಸಾಂಗ್ ಒಂದನ್ನು ದರ್ಶನ್ ರವರು ಬಿಡುಗಡೆ ಮಾಡಲಿದ್ದಾರೆ

‘ಜನ್ನಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ವೈಭವ್ ಮಹಾದೇವ್ ಜೂನಿ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಾಗ್ ಫಿಲ್ಮ್ ಸ್ಕೂಲ್ ನಲ್ಲಿ ನಿರ್ದೇಶಕರ ಕೋರ್ಸ್ ಮುಗಿಸಿರುವ ಅವರೀಗ ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ವಿಭಿನ್ನ ಟೈಟಲ್ ಜೂನಿ ಸಿನಿಮಾದಲ್ಲಿ ನಾಯಕಿ ರಿಷಿಕಾ ನಾಯಕ್ ನಟಿಸಿದ್ದಾರೆ.

ಇದನ್ನೂ ಓದಿ ಸದ್ದು ಮಾಡುತ್ತಿದೆ ಹೊಸ ವರ್ಷದ ಹೊಸ್ತಿಲಲ್ಲಿ ರಿಲೀಸ್ ಆದ `ಮ್ಯಾಟ್ನಿ’ ಚಿತ್ರದ ವಿಭಿನ್ನ ಹಾಡು
‘ಜೂನಿ’ ರೋಮ್ಯಾಂಟಿಕ್ ಕಥಾಹಂದರದ ಸಿನಿಮಾ. ದಿಯಾ ಬಳಿಕ ಪೃಥ್ವಿ ಮತ್ತೊಮ್ಮೆ ಪ್ರೇಮಕಥೆಗೆ ಬಣ್ಣ ಹಚ್ಚಿದ್ದಾರೆ. ಯಾರ ಮೇಲೆ ಪ್ರೀತಿ ಹುಟ್ಟುತ್ತೋ ಅವರ ಮೇಲೆ ಪ್ರೀತಿ ಆಗುತ್ತಾ? ಎಂಬ ಕಥೆಯ ಎಳೆ ಇಟ್ಕೊಂಡು ಚಿತ್ರ ಹೆಣೆಯಲಾಗಿದೆ. ತ್ರಿಶೂಲ ಕ್ರಿಯೇಷನ್ ನಡಿ ಮೋಹನ್ ಕುಮಾರ್ ಎಸ್ ಹಣ ಹಾಕಿದ್ದು, ಶ್ರೇಯಸ್ ವೈ ಎಸ್ ಸಹ ನಿರ್ಮಾಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ.

ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮುಗಿಸಿರುವ ‘ಜೂನಿ’ ಫೆಬ್ರವರಿ 9ಕ್ಕೆ ತೆರೆಗೆ ಬರ್ತಿದೆ. ನಕುಲ್ ಅಭ್ಯಂಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಶಾಂಕ್ ನಾರಾಯಣ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಅಜಿನ್ ಬಿ, ಜಿತಿನ್ ದಾಸ್ ಛಾಯಾಗ್ರಹಣ ಮಾಡಿದ್ದಾರೆ. ನವೀನ್ ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ.

Share this post:

Related Posts

To Subscribe to our News Letter.

Translate »