ಖ್ಯಾತ ನಿರ್ದೇಶಕ ಮಣಿರತ್ನಂ ಕನಸಿನ ಕೂಸು ‘ಪೊನ್ನಿಯಿನ್ ಸೆಲ್ವನ್-2 ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇದೇ 28ಕ್ಕೆ ವಿಶ್ವಾದ್ಯಂತ ಅದ್ದೂರಿಯಾಗಿ ಸಿನಿಮಾ ತೆರೆ ಕಾಣುತ್ತಿದೆ. ಈಗಾಗಲೇ ಟ್ರೇಲರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಚಿತ್ರ ತೆರೆಗೆ ಬರೋದಿಕ್ಕೆ ಇನ್ನೇನೂ ದಿನಗಣನೆಯಷ್ಟೇ ಬಾಕಿ ಇದೆ. ಚಿತ್ರತಂಡ ಕೂಡ ಭರದಿಂದ ಪ್ರಚಾರ ಕಾರ್ಯ ನಡೆಸುತ್ತಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಮೋಷನ್ ಮಾಡಿರುವ ಪಿಎಸ್-2 ಬಳಗ ಇದೇ 22ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಲಿದೆ.
ನರೇಶ್-ಪವಿತ್ರಾ ಲೋಕೇಶ್ ‘ಮತ್ತೆ ಮದುವೆ’ ಟೀಸರ್ ರಿಲೀಸ್
ಲೈಕಾ ಪ್ರೊಡಕ್ಷನ್ಸ್ ಮತ್ತು ಮದ್ರಾಸ್ ಟಾಕೀಸ್ ಬ್ಯಾನರ್ ನಡಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಸ್ಟಾರ್ ತಾರಾಬಳಗವಿರುವ ಸಿನಿಮಾ ‘ಪೊನ್ನಿಯಿನ್ ಸೆಲ್ವನ್ -2’. ಕಾರ್ತಿ, ಐಶ್ವರ್ಯಾ ರೈ, ಚಿಯಾನ್ ವಿಕ್ರಮ್, ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ದಿಗ್ಗಜ ಕಲಾವಿದರ ಸಮಾಗಮ ಚಿತ್ರದಲ್ಲಿದೆ. ಮಣಿರತ್ನಂ ನಿರ್ದೇಶನ ಒಂದು ಶಕ್ತಿಯಾದ್ರೆ, ಎ.ಆರ್.ರೆಹಮಾನ್ ಮ್ಯೂಸಿಕ್, ರವಿವರ್ಮನ್ ಕ್ಯಾಮೆರಾ ವರ್ಕ್, ಸ್ಟಾರ್ ಹಾಗೂ ಅನುಭವಿ ಕಲಾವಿದರ ನಟನೆ, ಅದ್ದೂರಿ ಮೇಕಿಂಗ್ ಎಲ್ಲವೂ ಸೀಕ್ವೆಲ್ 2 ಮೇಲೆ ನಿರೀಕ್ಷೆ ಹೆಚ್ಚಿಸಿದೆ.
`ಶಿವಾಜಿ’ ಮ್ಯಾಜಿಕ್‌ಗೆ ಪ್ರೇಕ್ಷಕ ಫಿದಾ! ಭರ್ಜರಿ ಎರಡನೇ ವಾರದತ್ತ `ಶಿವಾಜಿ ಸುರತ್ಕಲ್-2′
ಲೇಖಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕಲ್ಕಿ ಕೃಷ್ಣಮೂರ್ತಿ ಬರೆದ ಕಾದಂಬರಿ ‘ಪೊನ್ನಿಯಿನ್ ಸೆಲ್ವನ್’ ಆಧಾರಿತ ಚಿತ್ರವಿದು. ಸೆಪ್ಟೆಂಬರ್ 30ರಲ್ಲಿ ತೆರೆಕಂಡ ಮೊದಲ ಸೀಕ್ವೆಲ್ ವರ್ಲ್ ವೈಡ್ ಅಭೂತ ಪೂರ್ವ ಯಶಸ್ಸು ಕಂಡಿತ್ತು. ಗಲ್ಲಾಪೆಟ್ಟಿಗೆಯಲ್ಲಿ 500 ಕೋಟಿ ಲೂಟಿ ಮಾಡಿತ್ತು. ಇದೀಗ ಆ ಗೆಲುವಿನ ಸಂಭ್ರಮದಲ್ಲೇ ಸೀಕ್ವೆಲ್ ತೆರೆಗೆ ಬರ್ತಿದೆ. ಚೋಳ ಸಾಮ್ರಾಜ್ಯದ ದೃಶ್ಯವೈಭೋಗದ ಪೊನ್ನಿಯಿನ್ ಸೆಲ್ವನ್-2 ತಮಿಳು, ತೆಲುಗು, ಕನ್ನಡ, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಏಪ್ರಿಲ್ 28ಕ್ಕೆ ಅನಾವರಣಗೊಳ್ತಿದ್ದು, ಮಣಿರತ್ನ ತಂಡ ಕಟ್ಟಿಕೊಂಡ ಹೊರರಾಜ್ಯಗಳಲ್ಲಿ ಪ್ರಮೋಷನ್ ಕಹಳೆ ಮೊಳಗಿಸ್ತಿದ್ದಾರೆ.