Sandalwood Leading OnlineMedia

“ಪುರುಷೋತ್ತಮನ‌ ಪ್ರಸಂಗ” ಚಿತ್ರದ ಸುಂದರ ಯುಗಳಗೀತೆಗೆ ಅಭಿಮಾನಿಗಳು ಫಿದಾ .

ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿಕುಮಾರ್ ನಿರ್ಮಿಸಿರುವ, ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡ ಚಿತ್ರ “ಪುರುಷೋತ್ತಮನ‌ ಪ್ರಸಂಗ”.

ಇದನ್ನೂ ಓದಿ ಕೋಮಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರ “ಕುಟೀರ” ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಚಾಲನೆ .

ಇತ್ತೀಚಿಗೆ ಈ ಚಿತ್ರದ “ಅಚ್ಚುಮೆಚ್ಚು ನಿನ್ನ ಕಂಡರೆ” ಎಂಬ ಸುಂದರ ಯುಗಳಗೀತೆ A2 music ಮೂಲಕ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸೂಪರ್ ಹಿಟ್ ಗೀತೆಗಳನ್ನು ನೀಡಿರುವ ಜನಪ್ರಿಯ ಸಾಹಿತಿ ಜಯಂತ ಕಾಯ್ಕಿಣಿ ಈ ಹಾಡನ್ನು ರಚಿಸಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನೀಡಿ, ತಾವೇ ಹಾಡಿದ್ದಾರೆ. ಈ ಸುಂದರ ಗೀತೆಗೆ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಸದ್ಯದಲ್ಲೇ ಟ್ರೇಲರ್ ಬಿಡುಗಡೆಯಾಗಲಿದ್ದು, ಚಿತ್ರ ಮಾರ್ಚ್ ಒಂದರಂದು ತೆರೆಗೆ ಬರಲಿದೆ.

ಇದನ್ನೂ ಓದಿ ಸಂಯುಕ್ತ ಹೆಗಡೆ ಅಭಿನಯದ “ಕ್ರೀಂ” ಚಿತ್ರದ ಟ್ರೇಲರ್ ಬಿಡುಗಡೆ .

ಉತ್ತಮ ಹಾಸ್ಯ ಕಥಾಹಂದರವನ್ನು ಒಳಗೊಂಡಿರುವ ಈ ಚಿತ್ರದ ನಾಯಕನಾಗಿ ಅಜಯ್ ಅಭಿನಯಿಸಿದ್ದಾರೆ. ರಿಷಿಕಾ ನಾಯ್ಕ್ ಮತ್ತು ದೀಪಿಕಾ “ಪುರುಷೋತ್ತಮನ ಪ್ರಸಂಗ” ಚಿತ್ರದ ನಾಯಕಿಯರು. ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಸಾಯಿಕೃಷ್ಣ ಕುಡ್ಲ, ಶೋಭರಾಜ್ ಪಾವೂರು, ದೀಪಕ್ ರೈ ಪಾಣಾಜೆ, ಚೇತನ್ ರೈ ಮಾಣಿ,ಜ್ಯೋತಿಷ್ ಶೆಟ್ಟಿ ಹಾಗೂ ಇತರರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ ಬಜೆಟ್ ನಲ್ಲಿ ಡಾಲಿ ಬರೆದ ಸಾಲುಗಳನ್ನ ಮಂಡಿಸಿದ ಮುಖ್ಯಮಂತ್ರಿಗಳು

ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಕಾಪಿಕಾಡ್ ಈ ಚಿತ್ರದ ಸಹ ನಿರ್ದೇಶಕರು. ವಿಷ್ಣು ಅವರ ಛಾಯಾಗ್ರಹಣವಿರುವ “ಪುರುಷೋತ್ತಮನ ಪ್ರಸಂಗ” ಚಿತ್ರಕ್ಕೆ ನಕುಲ್ ಅಭಯ್ ಸಂಗೀತ ನೀಡಿದ್ದಾರೆ. ಅರ್ಜುನ್ ಕಜೆ, ಪ್ರಶಾಂತ್ ಕಲ್ಲಡ್ಕ, ವಿಕ್ರಮ್ ದೇವಾಡಿಗ, ಅನೂಪ್ ಸಾಗರ್ ಅವರು ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಂದೀಪ್ ಶೆಟ್ಟಿ ಅವರ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ಸಹ ನಿರ್ಮಾಪಕರು ಅಬೂಬಕರ್ ಪುತ್ತಾಕ.

Share this post:

Related Posts

To Subscribe to our News Letter.

Translate »