ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಜೋಡಿಯ ಪುಷ್ಪ ಸಿನಿಮಾ ಬಾಕ್ಸಾಫೀಸ್ ನಲ್ಲಿ ಧೂಳ್ ಎಬ್ಬಿಸಿತ್ತು..ಕಳೆದ ವರ್ಷದ ತೆರೆಗೆ ಬಂದ ಈ ಚಿತ್ರ ವಿಶ್ವಾದ್ಯಂತ 400 ಕೋಟಿಗೂ ಅಧಿಕ ಮೊತ್ತದ ಕಲೆಕ್ಷನ್ ಮಾಡಿತ್ತು. ರಕ್ತಚಂದನ ಕಳ್ಳ ಸಾಗಾಣಿಕೆ ಕಥಾಹಂದರದ ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್ ಅಬ್ಬರಿಸಿ ಬೊಬ್ಬಿರಿದ್ದರು. ಅಲ್ಲು ಆಕ್ಟಿಂಗ್, ಸುಕುಮಾರ್ ಟೀಕಿಂಗ್ ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿತ್ತು. ಬೆಳ್ಳಿಪರದೆಯಲ್ಲಿ ಅಖಂಡ ಗೆಲುವು ಕಂಡ ಪುಷ್ಪ ಪಾರ್ಟ್-2 ಮೇಲೆ ನಿರೀಕ್ಷೆ ಹೆಚ್ಚಿದೆ. ಪುಷ್ಪ ಸೀಕ್ವೆಲ್ ಹೇಗಿರುತ್ತದೆ ಎಂಬ ಕೌತಕದ ನಡುವೆ ಪುಷ್ಪ-2 ಅಂಗಳದಿಂದ ಹೊಸ ಅಪ್ ಡೇಟ್ ರಿಲೀಸ್ ಆಗಿದೆ.
ಸರ್ಕಾರಿ ಶಾಲೆಗಳನ್ನು ಉಳಿಸುವ ಯತ್ನದಲ್ಲಿ ಪ್ರವೀಣಾ
ಪುಷ್ಪ-2 ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಸರ್ ಪ್ರೈಸ್ ಗಿಫ್ಟ್ ಕೊಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಅದಕ್ಕೂ ಮುನ್ನವೇ ಸುಕುಮಾರ್ ತಂಡ ಸಣ್ಣದೊಂದು ವಿಡಿಯೋ ತುಣುಕು ರಿವೀಲ್ ಮಾಡಿ ಚಿತ್ರದ ಮೇಲಿನ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದ್ದಾರೆ. ಬುಲೆಟ್ ನಿಂದ ಗಾಯಗೊಂಡ ಪುಷ್ಪ ತಿರುಪತಿ ಜೈಲಿನಿಂದ ಎಸ್ಕೇಪ್ ಆಗಿರ್ತಾನೆ. ಎಲ್ಲೆಡೆ ಪುಷ್ಪನಿಗಾಗಿ ಹುಡುಗಾಟ ನಡೆಸಲಾಗ್ತಿದೆ. ಪುಷ್ಪ ಎಲ್ಲಿ ಎಂಬ ನಿರೀಕ್ಷೆಯಿಂದಿಗೆ ಗ್ಲಿಂಪ್ಸ್ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 7ರಂದು ಅಲ್ಲು ಅರ್ಜುನ್ ಬರ್ತ್ ಡೇಗೆ ಫುಲ್ ಟೀಸರ್ ರಿಲೀಸ್ ಆಗಲಿದ್ದು, ಐಕಾನ್ ಸ್ಟಾರ್ ಫ್ಯಾನ್ಸ್ ಪಿಕ್ಚರ್ ಅಭಿ ಬಾಕಿ ಹೈ ಎನ್ನುತ್ತಿದ್ದಾರೆ. ಪುಷ್ಪ-2 ಸಿನಿಮಾದಲ್ಲಿ ಅಲ್ಲು ಅರ್ಜುನ್ ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸ್ತಿದ್ದು, ಫಹಾದ್ ಫಾಸಿಲ್, ಅನುಸೂಯ, ಸುನಿಲ್ ಮತ್ತು ಇತರರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಪ್ರೊಡಕ್ಷನ್ ನಡಿ ಮೂಡಿಬರ್ತಿರುವ ಪುಷ್ಪ-2 ಸಿನಿಮಾಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನಿರ್ದೇಶನ ಮಾಡ್ತಿದ್ದಾರೆ.