ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರಕ್ಕೆ ನೂರು ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಹೈದರಾಬಾದ್ ಹಾಗೂ ಮುಂಬೈನಲ್ಲಿ ಚಿತ್ರೀಕರಣವಾಗಿದೆ. ಕೆಲವು ಮಾತಿನ ಭಾಗದ ಹಾಗೂ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಈ ತಿಂಗಳ ಕೊನೆಗೆ ಕೊನೆಯ ಹಂತದ ಚಿತ್ರೀಕರಣ ಆರಂಭವಾಗಲಿದೆ.
ಇದನ್ನೂ ಓದಿ ಮತ್ಸ್ಯಗಂಧ ಟ್ರೈಲರ್ ಮೆಚ್ಚಿ ಕೊಂಡಾಡಿದ ಸ್ಯಾಂಡಲ್ ವುಡ್ ಸ್ಟಾರ್ಸ್
ಇತ್ತೀಚಿಗೆ ನಿರ್ದೇಶಕ ಶಶಿಧರ್ ಅವರ ಹುಟ್ಟುಹಬ್ಬ ಹಾಗೂ ಚಿತ್ರ ನೂರು ದಿನಗಳ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರೈಸಿದೆ. ಈ ಎರಡು ಸಂಭ್ರಮಗಳನ್ನು ಸಂಭ್ರಮಿಸಲು ನಿರ್ಮಾಪಕ ರವಿರಾಜ್ ಹಾಗೂ ರಾಧಿಕಾ ಕುಮಾರಸ್ವಾಮಿ ಅವರು ನಿರ್ದೇಶಕರಿಂದ ನೂರು ಕೇಜಿ ಕೇಕ್ ಕಟ್ ಮಾಡಿಸಿದರು. ಇಡೀ ಚಿತ್ರತಂಡ ಈ ಸಂದರ್ಭದಲ್ಲಿ ಭಾಗಿಯಾಗಿತ್ತು.
ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸುತ್ತಿದ್ದಾರೆ. ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಾವ್ ರಮೇಶ್, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ ಜೊತೆಯಲೆ ಇರಲೇ ಸಾಂಗ್ ರಿಲೀಸ್, ರೊಮ್ಯಾಂಟಿಕ್ ಡ್ರಾಮಾ ಮೂಲಕ ಹೀರೋ ಆಗಿ ಜಾಯ್
ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.