Sandalwood Leading OnlineMedia

ಪೋಸ್ಟ್ ಪ್ರೊಡಕ್ಷನ್ ಕೊನೆಯ ಹಂತದಲ್ಲಿ ‘ರಾಘು’ ಚಿತ್ರ- ಶೀಘ್ರದಲ್ಲೇ ಟ್ರೇಲರ್ ರಿಲೀಸ್

ನಟ ವಿಜಯ ರಾಘವೇಂದ್ರ ಅಭಿನಯದ ‘ರಾಘು’ ಸಿನಿಮಾ ಫೋಸ್ಟರ್ ಮೂಲಕ ಸಖತ್ ಕ್ಯೂರಿಯಾಸಿಟಿ ಬಿಲ್ಡ್ ಮಾಡಿತ್ತು. ಅಣ್ಣನ ಚಿತ್ರಕ್ಕೆ ಶ್ರೀಮುರಳಿ ಕ್ಲ್ಯಾಪ್ ಮಾಡಿ ಶುಭ ಹಾರೈಸಿದ್ದರು. ಇದೀಗ ಚಿತ್ರತಂಡ ‘ರಾಘು’ ಸಿನಿಮಾ ಶೂಟಿಂಗ್ ಕಂಪ್ಲೀಟ್ ಮಾಡಿ ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆದಿದೆ.
 
 
 
ನವ ನಿರ್ದೇಶಕ ಎಂ ಆನಂದ್ ರಾಜ್ ನಿರ್ದೇಶನದ ರಾಘು ಚಿತ್ರದಲ್ಲಿ ಡಿಫ್ರೆಂಟ್ ಲುಕ್ ಹಾಗೂ ಡಿಫ್ರೆಂಟ್ ರೋಲ್ ನಲ್ಲಿ ವಿಜಯ ರಾಘವೇಂದ್ರ ಕಾಣಿಸಿಕೊಂಡಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿರುವ ಚಿತ್ರತಂಡ ಶೂಟಿಂಗ್ ಕಂಪ್ಲೀಟ್ ಮಾಡಿ ಕೊನೆಯ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿಯುತ್ತಿದ್ದಂತೆ ಟ್ರೇಲರ್ ಬಿಡುಗಡೆ ಮಾಡಲು ‘ರಾಘು’ ಟೀಂ ಪ್ಲ್ಯಾನ್ ಮಾಡಿಕೊಂಡಿದ್ದು ಶೀಘ್ರದಲ್ಲೇ ಟ್ರೇಲರ್ ಕೂಡ ಬಿಡುಗಡೆಯಾಗಲಿದೆ. ಹಾಗೆಯೇ ಇದೇ ವರ್ಷ ಸಿನಿಮಾ ತೆರೆಗೆ ತರಲು ಕೂಡ ತಯಾರಿ ನಡೆಯುತ್ತಿದೆ.
 
 
 
 
‘ರಾಘು’ ಎಂ ಆನಂದ್ ರಾಜ್ ನಿರ್ದೇಶನದ ಮೊದಲ ಸಿನಿಮಾ. ಆನ ಹಾಗೂ ಬ್ಯಾಂಗ್ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ದುಡಿದಿರುವ ಆನಂದ್ ರಾಜ್ ಈ ಚಿತ್ರಕ್ಕೆ ಕಥೆ ಬರೆದು ಆಕ್ಷನ್ ಕಟ್ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕನಾಗಿ ಬಡ್ತಿ ಪಡೆದಿದ್ದಾರೆ. ಕನ್ನಡದ ಮಟ್ಟಿಗೆ ಇದು ಹೊಸ ಪ್ರಯತ್ನ ಇರುವ ಸಿನಿಮಾ. ವಿಜಯ ರಾಘವೇಂದ್ರ ಹಿಂದೆಂದೂ ಕಾಣದ ಪಾತ್ರವನ್ನು ಇಲ್ಲಿ ನಿರ್ವಹಿಸಿದ್ದಾರೆ. ಅಡ್ವಾನ್ಸ್ ಟೆಕ್ನಾಲಜಿ ಇರುವ ಕ್ಯಾಮೆರಾಗಳನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದ್ದು, ದೊಡ್ಡ ಸೆಟ್ ಗಳನ್ನು ನಿರ್ಮಾಣ ಮಾಡಿ ಅದ್ದೂರಿಯಾಗಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ ಎನ್ನುತ್ತಾರೆ ಚಿತ್ರದ ನಿರ್ದೇಶಕರು.
ಡಿ ಕೆ ಎಸ್ ಸ್ಟುಡಿಯೋ, ಕೋಟಾ ಫಿಲಂ ಫ್ಯಾಕ್ಟರಿ ಪ್ರೊಡಕ್ಷನ್ ಹೌಸ್ ನಡಿ ಸಿನಿಮಾ ನಿರ್ಮಾಣವಾಗಿದ್ದು, ರಣ್ವಿತ್ ಶಿವಕುಮಾರ್, ಅಭಿಷೇಕ್ ಕೋಟ ಇಬ್ಬರು ನಿರ್ಮಾಪಕರು ಬಂಡವಾಳ ಹೂಡಿದ್ದಾರೆ. ವಿಜೇತ್ ಚಂದ್ರ ಸಂಕಲನ, ಉದಯ್ ಲೀಲಾ ಕ್ಯಾಮೆರಾ ವರ್ಕ್, ಸೂರಜ್ ಜೋಯಿಸ್ ಸಂಗೀತ ನಿರ್ದೇಶನ, ರಿತ್ವಿಕ್ ಮುರಳಿಧರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

Share this post:

Related Posts

To Subscribe to our News Letter.

Translate »