ಕನ್ನಡ ಚಿತ್ರರಂಗದಲ್ಲಿ ಪ್ರಯೋಗಾತ್ಮಕ ಸಿನಿಮಾಗಳ ಪರ್ವ ಕಾಲ ಶುರುವಾಗಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಬಹುನಿರೀಕ್ಷಿತ ಸಿನಿಮಾ ರಾಘು. ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ನಾಯಕನಾಗಿ ನಟಿಸಿರುವ ರಾಘು ಏಕವ್ಯಕ್ತಿ ಚಿತ್ರ. ಅಂದರೆ ಸಿನಿಮಾದ ಆರಂಭದಿಂದ ಅಂತ್ಯದವರೆಗೆ ನಿಮಗೆ ಕಾಣಿಸೋದು ನಾಯಕ ಮಾತ್ರ. ರಾಘು ಸಿನಿಮಾ ಮೂಲಕ ವಿಜಯ್ ರಾಘವೇಂದ್ರ ಇಂತಹದೊಂದು ಪ್ರಾಯೋಗಕ್ಕೆ ತಮ್ಮನ್ನು ತಾವು ಒಡ್ಡಿಕೊಂಡಿದ್ದಾರೆ. ಇಡೀ ಸಿನಿಮಾದಲ್ಲಿ ವಿಜಯ್ ರಾಘವೇಂದ್ರ ಒಬ್ಬರೇ ಇರುತ್ತಾರೆ.
’ಅಭಿರಾಮಚಂದ್ರ’ ಟೀಸರ್ ನೋಡಿದ ನಟ ಶಿವರಾಜ್‌ಕುಮಾರ್ ಏನಂದ್ರು ಗೊತ್ತಾ?
ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ರಾಘು ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಪ್ರೇಕ್ಷಕರ ಎದುರು ಬರಲು ಸಜ್ಜಾಗಿದೆ. ಏಪ್ರಿಲ್ 28ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಮೊದಲ ಹೆಜ್ಜೆಯಲ್ಲಿ ಹೊಸ ಜಾನರ್ ಹಾಗೂ ಹೊಸ ಪ್ರಯೋಗದೊಂದಿಗೆ ಎಂ ಆನಂದ್ ರಾಜ್ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಆನ ಹಾಗೂ ಬ್ಯಾಂಗ್ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವವಿರುವ ಎಂ ಆನಂದ್ ರಾಜ್ ಸ್ವತಂತ್ರ ನಿರ್ದೇಶಕರಾಗಿ ರಾಘು ಮೂಲಕ ಬಡ್ತಿ ಪಡೆದಿದ್ದಾರೆ.
ಬಿಡುಗಡೆಯಾಯ್ತು `ಬಾ ನಲ್ಲೆ ಮದುವೆಗೆ’ ಟೀಸರ್ ಮತ್ತು ಹಾಡುಗಳು
ಡಿಕೆ ಎಸ್ ಸ್ಟುಡಿಯೋ, ಕೋಟಾ ಫಿಲಂ ಫ್ಯಾಕ್ಟರಿ ಪ್ರೊಡಕ್ಷನ್ ಹೌಸ್ ನಡಿ ರಾಘು ಸಿನಿಮಾವನ್ನು ರನ್ವಿತ್ ಶಿವಕುಮಾರ್ ಹಾಗೂ ಅಭಿಷೇಕ್ ಕೋಟ ನಿರ್ಮಾಣ ಮಾಡಿದ್ದಾರೆ. ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಚಿತ್ರ ಕೂಡಿದ್ದು, ಉದಯ್ ಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರುಳಿಧರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಸೂರಜ್ ಜೋಯಿಸ್ ಸಂಗೀತ ನಿರ್ದೇಶನ ಮಾಡಿರುವ ಈ ಚಿತ್ರದ ಎರಡು ಹಾಡುಗಳಿಗೆ ವಾಸುಕಿ ವೈಭವ್ ಹಾಗೂ all ok ಕಂಠ ದಾನ ಮಾಡಿದ್ದಾರೆ… ಹಾಡುಗಳು ಸದ್ಯದಲ್ಲೇ ಬಿಡುಗಡೆಯಾಗಲಿವೆ.