Sandalwood Leading OnlineMedia

32 ವರ್ಷ ಬಳಿಕ ಮತ್ತೆ ಒಂದಾದ ತಲೈವಾ-ಬಿಗ್ ಬಿ

ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಸುರಿಯುತ್ತಿದೆ. ವಿಶೇಷ ಅಂದರೆ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಬ್ ಬಚ್ಚನ್ ಕೂಡ ನಟಿಸುತ್ತಿದ್ದಾರೆ.

 

ರಜನಿಕಾಂತ್ ಹಾಗೂ ಅಮಿತಾಬ್ ಬಚ್ಚನ್..ಭಾರತೀಯ ಚಿತ್ರರಂಗದ ಘಟಾನುಘಟಿ ನಾಯಕರು. ಈ ಇಬ್ಬರು ತಾರೆಯರು ಅಂದಾ ಕಾನೂನ್, ಗೆರಾಫ್ತಾರ್ ಮತ್ತು ಹಮ್ ಸಿನಿಮಾಗಳಲ್ಲಿ ನಟಿಸಿದ್ದರು. ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದವು. ರಜನಿ ಬಚ್ಚನ್ ಅಭಿನಯಕ್ಕೂ ಮೆಚ್ಚುಗೆಯ ಮಹಾಪೂರ ಹರಿದು ಬಂದಿತ್ತು. ಈ ಸಿನಿಮಾಗಳ ಯಶಸ್ಸಿನ ನಂತರ ಇದೀಗ 32 ವರ್ಷದ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ.ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ.

ಇದನ್ನೂ ಓದಿ:ಹಾಡುಗಳ ಮೂಲಕ ಕಲಾರಸಿಕರ ಮನ ಗೆದ್ದ “ರೋಡ್ ಕಿಂಗ್”

ರಜನಿ-ಬಚ್ಚನ್ ನಟಿಸಲಿರುವ, ಲೈಕಾ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ಜೈಭೀಮ್ ಖ್ಯಾತಿಯ ಟಿಜೆ ಜ್ಞಾನವೇಲ್ ನಿರ್ದೇಶಿಸಲಿದ್ದಾರೆ. ಜೈ ಭೀಮ್ ಮೂಲಕ ಇಂಡಿಯನ್ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದ್ದ ಜ್ಞಾನವೇಲ್ ರಜನಿ ಹಾಗೂ ಬಚ್ಚನ್ ನಂತಹ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.

 

Share this post:

Related Posts

To Subscribe to our News Letter.

Translate »