ಮಾನವನ ಜೀವನದಲ್ಲಿ ರಾಜಯೋಗ ಎಂಬ ಪದಕ್ಕೆ ಬಹಳ ಮಹತ್ವವಿದೆ. ರಾಜಯೋಗ ಬಂತೆಂದರೆ ಮುಂದೆ ಆತನಿಗೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಹಾಸ್ಯನಟ ಪೋಷಕನಟ ಧರ್ಮಣ್ಣ ನಾಯಕನಾಗಿ ನಟಿಸಿರುವ ಚಲನಚಿತ್ರದ ಹೆಸರೂ ಸಹ ರಾಜಯೋಗ. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ವಿಶೇಷವಾಗಿ ಇಬ್ಬರು ಸಾಮಾನ್ಯ ಮಹಿಳೆಯರು ಈ ಟ್ರೈಲರ್ ಬಿಡುಗಡೆಗೊಳಿಸಿದರು. ಲಿಂಗರಾಜ ಉಚ್ಚಂಗಿದುರ್ಗ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು ಶ್ರೀರಾಮರತ್ನ ಪ್ರೊಡಕ್ಷನ್ಸ್ ಅಡಿ ಕುಮಾರ ಕಂಠೀರವ, ದೀಕ್ಷಿತ್ ಕೃಷ್ಣ, ಪ್ರಭು ಚಿಕ್ಕನಾಯ್ಕನಹಳ್ಳಿ, ಲಿಂಗರಾಜು ಕೆಎನ್, ಅರ್ಜುನ್ ಅಣತಿ ಅಲ್ಲದೆ ಧರ್ಮಣ್ಣ ಸಹೋದರ ಹೊನ್ನಪ್ಪ ಕಡೂರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಇದನ್ನೂ ಓದಿ: Sapta Sagaradaache Ello – `Side A’ Review : `ಅಳು’ವ ಕಡಲೊಳು `ಒಲವ’ ಹಾಯಿ ದೋಣಿ..!
ನಾಯಕನಟ ಧರ್ಮಣ್ಣ ಮಾತನಾಡುತ್ತ ನಾನಿಲ್ಲಿ ಕೂರಲು ಕಾರಣ ರಾಮಾ ರಾಮಾ ರೇ ತಂಡ. ಈ ಚಿತ್ರದಲ್ಲಿ ಕಥೆ, ನಿರ್ದೇಶಕ ಇಬ್ಬರೂ ನಾಯಕರು. ನಾನೊಂದು ಪಾತ್ರ ಮಾಡಿದ್ದೇನೆ ಅಷ್ಟೇ. ಈ ಪಾತ್ರದಲ್ಲಿ ಕಾಮಿಡಿ, ಎಮೋಷನ್ ಎಲ್ಲಾ ಇದೆ, ಈ ಥರದ ಪಾತ್ರವನ್ನು ಹಿಂದೆಂದೂ ಮಾಡಿಲ್ಲ, ಗ್ರಾಮೀಣ ಭಾಗದಲ್ಲಿ ನಡೆಯೋ ಕಥೆಯಲ್ಲಿ ಸಂಬಂಧದ ಮೌಲ್ಯಗಳನ್ನು ಹಾಸ್ಯದ ಹಿನ್ನೆಲೆಯಲ್ಲಿ ಹೇಳಲು ಪ್ರಯತ್ನಿಸಿದ್ದೇವೆ. ಈ ಸಿನಿಮಾ ನೋಡುವಾಗ ಹಿರಿಯ ನಟರಾದ ಅನಂತನಾಗ್, ಶಶಿಕುಮಾರ್ ಖಂಡಿತ ನೆನಪಾಗ್ತಾರೆ. ಸದ್ಯದಲ್ಲೇ ನಿಮ್ಮ ಮುಂದೆ ಬರುತಗತೇವೆ ಎಂದು ಹೇಳಿದರು.
ಇದನ್ನೂ ಓದಿ: Totapuri-2 review; ಮಾನವೀಯ ಮೌಲ್ಯಗಳ ಬಗ್ಗೆ ಕಾ`ಮಿಡಿ’ಯಾಗಿ ಹೇಳುವ `ಗಂಭೀರ’ ಪ್ರಯತ್ನ!
ಚಿತ್ರದನಾಯಕಿಯಾಗಿ ನಿರೀಕ್ಷಾರಾವ್ ನಟಿಸಿದ್ದಾರೆ. ಚಿತ್ರದಲ್ಲಿ 5 ಹಾಡುಗಳಿದ್ದು, ಅಕ್ಷಯ್ ರಿಶಭ್ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಷ್ಣುಪ್ರಸಾದ್ ಕ್ಯಾಮೆರಾವರ್ಕ್ ನಿಭಾಯಿಸಿದ್ದಾರೆ. ಬಿ.ಎಸ್.ಕೆಂಪರಾಜು ಅವರ ಸಂಕಲನ ಈ ಚಿತ್ರಕ್ಕಿದೆ, ನಾಗೇಂದ್ರ ಶಾ ನಾಯಕನ ತಂದೆಯ ಪಾತ್ರ ನಿರ್ವಹಿಸಿದ್ದು, ಕೃಷ್ಣ ಮೂರ್ತಿ ಕವತ್ತಾರ್ ಒಬ್ಬ ಜೋತಿಷಿಯ ಪಾತ್ರ ಮಾಡಿದ್ದಾರೆ. ಶ್ರೀನಿವಾಸಗೌಡ್ರು, ಉಷಾ ರವಿಶಂಕರ್, ಮಹಾಂತೇಶ ಹಿರೇಮಠ್ ಉಳಿದ ಪಾತ್ರವರ್ಗದಲ್ಲಿದ್ದಾರೆ.