Sandalwood Leading OnlineMedia

ಅಕ್ಟೋಬರ್‌ ನಲ್ಲಿ ರಜನಿಯ ‘ವೆಟ್ಟೈಯಾನ್’ ಎಂಟ್ರಿ

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ವೆಟ್ಟೈಯಾನ್. ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ವೆಟ್ಟೈಯಾನ್ ಸಿನಿಮಾ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ. ಸೂರ್ಯ ನಟಿಸಿದ ‘ಜೈ ಭೀಮ್’ ಸಿನಿಮಾ ನಿರ್ದೇಶಿಸಿದ್ದ ಟಿ.ಎಸ್. ಜ್ಞಾನವೇಲ್ ‘ವೆಟ್ಟೈಯಾನ್’ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೇಲೆ ನಿರೀಕ್ಷೆ ದುಪ್ಪಟ್ಟಾಗೋದಿಕ್ಕೆ ಮತ್ತೊಂದು ಕಾರಣ ತಲೈವಾ ಹಾಗೂ ಬಿಗ್ ಬಿ ಸಂಗಮ. ಭಾರತೀಯ ಚಿತ್ರರಂಗದ ದಿಗ್ಗಜರಾದ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ವೆಟ್ಟೈಯಾನ್ ಸಿನಿಮಾ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಅಭೂತಪೂರ್ವ ಸಮಾಗಮಕ್ಕೆ ವೇದಿಕೆ ನಿರ್ಮಿಸಿದೆ.

ಇನ್ನಷ್ಟು ಓದಿಗಾಗಿ:-  `ಎಲ್ಟು ಮುತ್ತಾ’ ಟೈಟಲ್ ಪೋಸ್ಟರ್ ರಿಲೀಸ್…ಸಾಥ್ ಕೊಟ್ಟ ಶೈಲಜಾ ವಿಜಯ್ ಕಿರಗಂದೂರು
‘ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಲಿದ್ದಾರೆ. ಹೀಗಾಗಿಯೇ ಇದು ಬಹು ತಾರಾಗಣದ ಚಿತ್ರವಾಗಲಿದೆ. ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ. ತಿರುವನಂತಪುರಂ, ತಿರುನೆಲ್ವೇಲಿ, ಚೆನ್ನೈ, ಮುಂಬೈ, ಆಂಧ್ರಪ್ರದೇಶ ಮತ್ತು ಹೈದರಾಬಾದ್‌ನಲ್ಲಿ ಚಿತ್ರದ ಚಿತ್ರೀಕರಣ‌ ನಡೆಸಲಾಗಿದೆ. ಇಂಡಿಯನ್, ಖೈದಿ ನಂಬರ್ 150, ರೋಬೋ 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಪ್ರೊಡಕ್ಷನ್ ವೆಟ್ಟೈಯಾನ್ ಸಿನಿಮಾ ನಿರ್ಮಿಸುತ್ತಿದೆ.

 

Share this post:

Related Posts

To Subscribe to our News Letter.

Translate »