Sandalwood Leading OnlineMedia

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಅನಾವರಣವಾಗಲಿದೆ ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ಚಿತ್ರದ ಟ್ರೇಲರ್ .

 

ಕರ್ಮ ಬ್ರೋಸ್ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ ” ಚಿತ್ರದ “ಕಣ್ಮಣಿ” ಹಾಗೂ ಶೀರ್ಷಿಕೆ ಗೀತೆ ಕನ್ನಡಿಗರ ಮನ‌ ಗೆದ್ದಿದೆ. ಲಂಡನ್ ಚಿತ್ರೀಕರಣದ ಸನ್ನಿವೇಶಗಳು ಹಾಗೂ ಟೀಸರ್ ಸಹ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರದ ಟ್ರೇಲರ್ ಯಾವಾಗ ಬಿಡುಗಡೆಯಾಗುತ್ತದೆ? ಎಂಬ ಕುತೂಹಲ ಅಭಿಮಾನಿಗಳ ಮನದಲ್ಲಿ ಮನೆ ಮಾಡಿತ್ತು. ಈಗ ಅದಕ್ಕೆ ಉತ್ತರ ಸಿಕ್ಕಿದೆ. ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಜನವರಿ 31ರಂದು ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಅನಾವರಣವಾಗಲಿದೆ.

ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ (ಲಂಡನ್) ಹಾಗೂ ಕಿರಣ್ ಭರ್ತೂರು(ಕೆನಡಾ) ಫೆಬ್ರವರಿ 14 ರಂದು ಅದ್ದೂರಿಯಾಗಿ ಈ ಚಿತ್ರವನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದಾರೆ.

ಮನಮೋಹಕ ಕಥೆ, ಹಾಸ್ಯ, ಲಂಡನ್‌ನ ಅದ್ಭುತ ದೃಶ್ಯಗಳು ಮತ್ತು ಮಧುರವಾದ ಸಂಗೀತ ಚಿತ್ರದ ಹೈಲೆಟ್ ಆಗಿದ್ದು, ಪ್ರೇಕ್ಷಕರನ್ನು ಆಕರ್ಷಿಸುವ ಭರವಸೆಯನ್ನು ನೀಡುತ್ತಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಗುರುನಂದನ್ ಅವರಿಗೆ ನಾಯಕಿಯಾಗಿ ಮೃದುಲಾ ನಟಿಸಿದ್ದಾರೆ. ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಮನೋಹರ್ ಜೋಶಿ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಹಾಗೂ ಅಮಿತ್ ಚವಳ್ಕರ್ ಅವರ ಸಂಕಲನವಿರುವ “ರಾಜು ಜೇಮ್ಸ್ ಬಾಂಡ್” ಚಿತ್ರಕ್ಕೆ ಜಗದೀಶ್ ನಡನಹಳ್ಳಿ ಸಂಭಾಷಣೆ ಬರೆದಿದ್ದಾರೆ.

Share this post:

Related Posts

To Subscribe to our News Letter.

Translate »