Sandalwood Leading OnlineMedia

ಸಖತಾಗಿದೆ `ರಾಜು ಜೇಮ್ಸ್ ಬಾಂಡ್’ ಚಿತ್ರದ `ಬೇಕಿತ್ತಾ’  ಹಾಡು!

 

ಫಸ್ಟ್ rank ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್” ಚಿತ್ರಕ್ಕಾಗಿ ದೀಪಕ್ ಮಧುವನಹಳ್ಳಿ ಬರೆದಿರುವ “ಬೇಕಿತ್ತಾ ಬೇಕಿತ್ತಾ, ಈ ಲವು ಬೇಕಿತ್ತಾ” ಎಂಬ ಹಾಡಿನ ಲಿರಿಕಲ್ ವಿಡಿಯೋ A2 music ಮೂಲಕ ಬಿಡುಗಡೆಯಾಗಿದೆ. ಅಂತೋನಿ ದಾಸ್ ಹಾಡಿರುವ ಈ ಹಾಡಿಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಅಧಿಕಾರಿ ವೆಂಕಟೇಶ್ ಹಾಡನ್ನು ಬಿಡುಗಡೆ ಮಾಡಿದ್ದಾರೆ.ರಾಜು ಜೇಮ್ಸ್ ಬಾಂಡ್” ನನ್ನ ನಿರ್ದೇಶನದ ಮೂರನೇ ಚಿತ್ರ. ಈ ಚಿತ್ರ ವಿಭಿನ್ನ ಕಥಾಹಂದರ ಹೊಂದಿದೆ. ಚಿತ್ರೀಕರಣ ಮುಕ್ತಾಯವಾಗಿದೆ. ಆಗಸ್ಟ್ ನಲ್ಲಿ ತೆರೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ‌. ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಬರ್ತೂರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಲಂಡನ್ ನಲ್ಲಿ 21 ದಿನಗಳ ಚಿತ್ರೀಕರಣವಾಗಿದೆ. ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ದೀಪಕ್ ಮಧುವನಹಳ್ಳಿ.

ಇದನ್ನೂ ಓದಿ:  ಅಗ್ರಸ್ಥಾನದಲ್ಲಿ ಡಾಲಿ ರಿಲೀಸ್ ಮಾಡಿದ `ಅಗ್ರಸೇನಾ’ ಚಿತ್ರದ ಟ್ರೈಲರ್!

ನಿರ್ದೇಶಕ ದೀಪಕ್ ಮಧುವನಹಳ್ಳಿ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಮಂಜು ವಿಶ್ವಕರ್ಮ ಹಾಗೂ ಕಿರಣ್ ಬರ್ತೂರ್ ಯಾವುದೇ ಕೊರತೆ ಬಾರದಂತೆ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ನನ್ನ ಪಾತ್ರ ನನ್ನ ಹಿಂದಿನ ಚಿತ್ರಗಳಿಗಿಂತ ವಿಭಿನ್ನವಾಗಿರುತ್ತದೆ. ಅನೂಪ್ ಸೀಳಿನ್ ಸಂಗೀತದಲ್ಲಿ ಮೂಡಿಬಂದಿರುವ ಎಲ್ಲಾ ಹಾಡುಗಳು ಚೆನ್ನಾಗಿದೆ. ಇಂದು ಮೊದಲ ಹಾಡು ಬಿಡುಗಡೆಯಾಗಿದೆ ಎಂದು ನಾಯಕ ಗುರುನಂದನ್ ತಿಳಿಸಿದರು.ರಾಜು ಜೇಮ್ಸ್ ಬಾಂಡ್”  ಒಂದೊಳ್ಳೆ ಚಿತ್ರ. ಚಿತ್ರ ಉತ್ತಮವಾಗಿ ಮೂಡಿ ಬರಲು ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ. ಈ ಚಿತ್ರವನ್ನು ನೋಡಿ ಪ್ರೋತ್ಸಾಹಿಸಿ. ಮುಂದೆ ಕೂಡ ಕನ್ನಡದಲ್ಲಿ ಇನ್ನಷ್ಟು ಚಿತ್ರಗಳನ್ನು ನಿರ್ಮಾಣ ಮಾಡುತ್ತೇವೆ ಎಂದರು ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಬರ್ತೂರ್.

 

ಇದನ್ನೂ ಓದಿಅಗ್ರಸ್ಥಾನದಲ್ಲಿ ಡಾಲಿ ರಿಲೀಸ್ ಮಾಡಿದ `ಅಗ್ರಸೇನಾ’ ಚಿತ್ರದ ಟ್ರೈಲರ್!

ಚಿತ್ರದಲ್ಲಿ ನಾಲ್ಕು ಹಾಡುಗಳಿದೆ‌. ನಾಲ್ಕು ಹಾಡುಗಳು ಸುಮಧುರವಾಗಿದೆ. ಇಂದು ಮೊದಲ ಹಾಡು ಬಿಡುಗಡೆಯಾಗಿದೆ ಎಂದು ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಮಾಹಿತಿ ನೀಡಿದರು. ಛಾಯಾಗ್ರಹಣದ ಕುರಿತು ಮನೋಹರ್ ಜೋಶಿ ಮಾತನಾಡಿದರು. ಗುರುನಂದನ್ ಅವರಿಗೆ ನಾಯಕಿಯಾಗಿ ಮೃದಲ‌ ನಟಿಸಿದ್ದಾರೆ. ರವಿಶಂಕರ್ ಸಾಧುಕೋಕಿಲ, ಅಚ್ಯುತಕುಮಾರ್, ಚಿಕ್ಕಣ್ಣ, ಜೈ ಜಗದೀಶ್, ತಬಲ ನಾಣಿ, ಮಂಜುನಾಥ್ ಹೆಗಡೆ, ವಿಜಯ್ ಚೆಂಡೂರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

 

 

 

 

Share this post:

Related Posts

To Subscribe to our News Letter.

Translate »