Sandalwood Leading OnlineMedia

`ಕೋಟಿ’ ಅಖಾಡಕ್ಕೆ ರಮೇಶ್ ಇಂದಿರಾ; ಕುತೂಹಲ ಕೆರಳಿಸಿದ `ದಿನೂ ಸಾವ್ಕಾರ್’ ಅವತಾರ!

 

ಬೆಳ್ಳಗೆ ನೆರೆತ ಕೂದಲು, ಗಡ್ಡ, ಮೀಸೆ, ಕುತ್ತಿಗೆಗೊಂದು ಚೈನು, ಬಾಯಲ್ಲೊಂದು ಸಿಗರೇಟು, ಕಣ್ಣಲ್ಲಿ ಯಾರದೋ ಜೀವನವನ್ನು ಬುಡಮೇಲು ಮಾಡುವ ಸಂಚು. ದಿನೂ ಸಾವ್ಕಾರ್‌ ಪಾತ್ರಕ್ಕೆ ನಟ ರಮೇಶ್‌ ಇಂದಿರಾ ಹೊಸದೊಂದು ಎನರ್ಜಿ ತಂದಂತೆ ಕಾಣಿಸುತ್ತಿದೆ ಎಂದರೆ ಅದರಲ್ಲಿ ಅತಿಶಯೋಕ್ತಿ ಇಲ್ಲ. ಕೋಟಿ ಸಿನಿಮಾದ ಟೀಸರ್‌ ಬಿಡುಗಡೆ ಆದಾಗಿಂದ ಖಳನಾಯಕ ದಿನೂ ಸಾವ್ಕಾರ್‌ ಪಾತ್ರದ ಬಗ್ಗೆ ಕುತೂಹಲ ಹೆಚ್ಚಾಗುತ್ತಲೇ ಹೋಗಿದೆ. ಸಾವ್ಕಾರ್‌ ಮತ್ತು ಕೋಟಿಯ ಟಕ್ಕರ್‌ ನೋಡುವುದಕ್ಕೆ ಇದು ಅತೀವ ಆಸಕ್ತಿಯನ್ನು ಹುಟ್ಟುಹಾಕಿರುವುದಂತೂ ಸತ್ಯ. ಅದಕ್ಕೆ ಕಾರಣ ಸಾವ್ಕಾರ್‌ ಪಾತ್ರದಲ್ಲಿ ರಮೇಶ್‌ ಇಂದಿರಾ ಕಾಣಿಸಿಕೊಂಡಿರುವ ರೀತಿ. ಜೋರಾಗಿ ಮಳೆ ಸುರಿಯುತ್ತಿರುವಾಗ, ಹುಡುಗರೆಲ್ಲಾ ಕೊಡೆ ಹಿಡಿದಿರುವಾಗ ಕಾರಿಂದ ಇಳಿಯುತ್ತಿರುವ ಸಾವ್ಕಾರ್‌ ಚಿತ್ರ ಮತ್ತು ಹಿನ್ನೆಲೆ ಸಂಗೀತದ ಬಗ್ಗೆ ಈಗಾಗಲೇ ಚಿತ್ರ ಜಗತ್ತಿನಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗಿರುವುದಂತೂ ನಿಜ.

READ MORE: ಕಟ್ ಇಲ್ಲ, ಮ್ಯೂಟ್ ಇಲ್ಲ, `ಸತ್ಯಂ’ ಚಿತ್ರಕ್ಕೆ ಸೆನ್ಸಾರ್ ಫಿದಾ!

ಕತೆಯಲ್ಲಿ ವಿಲನ್ನುಗಳು ಹೇಗೆ ತಮ್ಮನ್ನು ಆಕರ್ಷಿಸುತ್ತಾರೆ ಎನ್ನುವುದರ ಬಗ್ಗೆ ಕೋಟಿ ಸಿನಿಮಾದ ಬರಹಗಾರ ಮತ್ತು ನಿರ್ದೇಶಕ ಪರಮ್‌ ತಮ್ಮ ಸೋಶಿಯಲ್‌ ಮೀಡಿಯಾ ಖಾತೆಯಲ್ಲಿ ವಿವರವಾಗಿ ಬರೆದುಕೊಂಡಿದ್ದಾರೆ. “ಸುಯೋಧನ ಇಲ್ಲದ ಮಹಾಭಾರತ ಇಲ್ಲ. ರಾವಣನಿಲ್ಲದ ರಾಮಾಯಣವಿಲ್ಲ. ಮನಸ್ಸಿನ ಆಳದಲ್ಲಿ ಹುದುಗಿರುವ ಆಸೆಗಳನ್ನು ಈ ಪಾತ್ರಗಳು ನಮಗೆ ಭೇಟಿ ಮಾಡಿಸುತ್ತವೆ. ಇಷ್ಟ ಇಲ್ಲ ಎಂದು ಎಷ್ಟೇ ಹೇಳಿದರೂ ಖಳನಾಯಕರ ಪಾತ್ರಕ್ಕೆ ಅದೇನೋ ಸೆಳೆತ ಇದೆ. ಇಲ್ಲದಿದ್ದರೆ ರಾವಣನ ಲಂಕೆ ಸುಭಿಕ್ಷವಾಗಿತ್ತು ಎಂದು ಓದಿದಾಗ ಯಾಕೆ ಖುಷಿಯಾಗಬೇಕು? ಸುಯೋಧನ ಮತ್ತು ಕರ್ಣನ ನಡುವಿನ ಗೆಳೆತವನ್ನು ನೋಡಿ ಯಾಕೆ ನಾವು ಭಾವುಕರಾಗಬೇಕು?
ಕತೆಯನ್ನು ಮುಂದೆ ತೆಗೆದುಕೊಂಡು ಹೋಗುವವನು, ನಾಯಕನ ಮೌಲ್ಯಗಳನ್ನು ಪ್ರಶ್ನಿಸುವವನು, ಕತೆಗೊಂದು ಎನರ್ಜಿ ಕೊಡುವವನು ಖಳನಾಯಕ!ʼ ಎಂದು ಬರೆದುಕೊಂಡಿದ್ದಾರೆ ಪರಮ್.

READ MORE:Chittara exclusive : ಕಿರುತೆರೆಯ ಡಾಲ್.. ಎಲ್ಲರ ಮುದ್ದಿನ ಬೆಡಗಿ.. ಮಲೈಕಾ ಟಿ ವಸುಪಾಲ್
ತಮ್ಮ ಸಿನಿಮಾದ ಖಳನಟನ ಪಾತ್ರವನ್ನು ಅವರು ವಿವರಿಸಿರುವ ರೀತಿಯಿಂದ ಈ ಪಾತ್ರದ ಸುತ್ತ ಇರುವ ಎಕ್ಸೈಟ್ಮೆಂಟ್‌ ಇನ್ನಷ್ಟು ಜಾಸ್ತಿಯಾಗಿದೆ. ʼಕೋಟಿಯ ಖಳನಾಯಕನ ಹೆಸರು ದಿನೂ ಸಾವ್ಕಾರ್.‌ ರಣತಂತ್ರದಲ್ಲಿ ಎತ್ತಿದ ಕೈ. ಬುದ್ಧಿವಂತ. ಸ್ವಲ್ಪ ಅನ್‌ ಸ್ಟೇಬಲ್.‌ ತಾನು ಹೇಳಿದ್ದನ್ನು ಎಲ್ಲರೂ ಕೇಳಬೇಕು ಎಂದುಕೊಂಡಿರುವ ವ್ಯಕ್ತಿ. ಮಾತು ಕೇಳದವರನ್ನು ಕೇಳಿಸುತ್ತೇನೆ ಎನ್ನುವುದನ್ನು ನಂಬಿದವನು. ಸಿಕ್ಕಾಪಟ್ಟೆ ಮಜಾ ಕೊಡುವ ಪಾತ್ರ ದಿನೂ ಸಾವ್ಕಾರ್ರದು. ರಮೇಶ್‌ ಇಂದಿರಾ ಈ ಪಾತ್ರವನ್ನು ನಿಭಾಯಿಸಿದ ರೀತಿ ನೋಡಿ ನಾನು ಆಲ್ಮೋಸ್ಟ್‌ ಗಾಬರಿಯಾಗಿದ್ದೇನೆʼ ಎಂದು ಅವರು ಬರೆದಿದ್ದಾರೆ.
ಇದೇ ಜೂನ್‌ ೧೪ರಂದು ಕೋಟಿ ಸಿನಿಮಾ ಬಿಡುಗಡೆ ಆಗಲಿದೆ.

Share this post:

Related Posts

To Subscribe to our News Letter.

Translate »