ಹೊಯ್ಸಳ ಕ್ರಿಯೇಷನ್ಸ್ ಲಾಂಛನದಲ್ಲಿ ಹೊಯ್ಸಳ ಕೋಣನೂರು ನಿರ್ಮಿಸಿರುವ, ರಾಜಕುಮಾರ್ ಅಸ್ಕಿ ನಿರ್ದೇಶನದ ಹಾಗೂ ರಂಗಾಯಣ ರಘು ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಸಂಪತ್ ರಾಜ್ ಇನ್ನಿತರರು ಪ್ರಮುಖಪಾತ್ರದಲ್ಲಿ ನಟಿಸಿರಯವ “ರಂಗ ಸಮುದ್ರ” ಚಿತ್ರ ಜನವರಿ 19ರಂದು ಬಿಡುಗಡೆಯಾಗಲಿದೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಮೂಲಕ “ರಂಗ ಸಮುದ್ರ” ಈಗಾಗಲೇ ಜನರ ಮನ ಗೆದ್ದಿದೆ. ಜಾನಪದ ಸೊಗಡಿನ ಹಾಗೂ ಕೌಟುಂಬಿಕ ಮನರಂಜನೆಯ ಕಥಾಹಂದರ ಹೊಂದಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ.
ಇದನ್ನೂ ಓದಿ ಸಿನಿಮಾ ಸಕ್ಸಸ್ ಗಾಗಿ ತವರೂರಿನ ದೇವರ ಮೊರೆ ಹೋದ್ರಾ ಪೂಜಾ ಹೆಗ್ಡೆ?
ವಾಗೀಶ್ ಚನ್ನಗಿರಿ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ದೇಸಿ ಮೋಹನ್ ಸಂಗೀತ ನೀಡಿದ್ದಾರೆ. ಕೀರವಾಣಿ, ಕೈಲಾಶ್ ಖೇರ್, ವಿಜಯ ಪ್ರಕಾಶ್ ನವೀನ್ ಸಜ್ಜು ಮುಂತಾದ ಖ್ಯಾತ ಗಾಯಕರು ಹಾಡುಗಳನ್ನು ಹಾಡಿದ್ದಾರೆ. ಆರ್ ಗಿರಿ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಇದನ್ನೂ ಓದಿ ಕಾಟೇರ ಸಿನಿಮಾ ನೋಡ್ತಾರಾ ಕಿಚ್ಚ ಸುದೀಪ್?
ರಾಘವೇಂದ್ರ ರಾಜಕುಮಾರ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಂಗಾಯಣ ರಘು, ಸಂಪತ್ ರಾಜ್, ಕೆವಿಆರ್, ದಿವ್ಯ ಗೌಡ, ಮೂಗುರು ಸುರೇಶ್, ಉಗ್ರಂ ಮಂಜು, ಸ್ಕಂದ ಮುಂತಾದವರು ತಾರಾಬಳಗದಲ್ಲಿದ್ದಾರೆ.