Sandalwood Leading OnlineMedia

ಅಂತಿಮ ಹಂತದ ಚಿತ್ರೀಕರಣ ಮುಗಿಸಿದ ‘ರಂಗಸಮುದ್ರ’

 

 

 

ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ  ಹಿರಿಯ ಛಾಯಾಗ್ರಾಹಕ ಗಿರಿ ಚಿತ್ರೀಕರಿಸಿಕೊಂಡರು.

 

ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ: ದೊಡ್ಮನೆ ಭೇಟಿಯಾದ ತೋಟಗಾರಿಕ ಇಲಾಖೆ

 

ರಂಗಾಯಣ ರಘು, ಸಂಪತ್ ರಾಜ್,ಕರಾವಳಿಯ ಕೆವಿಆರ್ ಮತ್ತು  ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ, ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, ಸ್ಕಂದ ತೇಜಸ್,   ಡ್ರಾಮಾ ಜ್ಯೂನಿಯರ್ ಮಹೇಂದ್ರ ಮತ್ತಿತರರು ಚಿತ್ರದ ಭೂಮಿಕೆಯಲ್ಲಿದ್ದಾರೆ. ಚಿತ್ರದ ಪ್ರಮುಖ ದೃಶ್ಯಕ್ಕೆ ಅಂತಿಮ ಹಂತದ ಚಿತ್ರೀಕರಣ ಕಳೆದ ಅಕ್ಟೋಬರ್ ನಲ್ಲಿ ನಡೆಯ ಬೇಕಿತ್ತು. ಇದಕ್ಕಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ಚಿತ್ರತಂಡ ಸಂಪರ್ಕಿಸಿತ್ತು. ಆದರೆ ವಿಧಿ ಅವರನ್ನು ಹಠಾತ್ ಸೆಳೆದೊಯ್ದಿತ್ತು. ಈ ಘಟನೆಯಿಂದ ಚಿತ್ರತಂಡ ಶಾಕ್ ಗೆ ಒಳಗಾಗಿತ್ತು. ಇದೀಗ ಇನ್ನೊಬ್ಬರು ಸ್ಟಾರ್ ನಟರು ಆ ದೃಶ್ಯದಲ್ಲಿ ನಟಿಸಿದ್ದಾರೆ.

 

 

ಸಧ್ಯಕ್ಕೆ ಅವರ ವಿವರಗಳನ್ನು ಸಸ್ಪೆನ್ಸ್ ಆಗಿ ಇಡಲಾಗಿದೆ. ಈ ವಿವರಗಳನ್ನು ಚಿತ್ರತಂಡ ಮುಂದಿನ ದಿನಗಳಲ್ಲಿ ಹಂಚಿಕೊಳ್ಳಲಿದೆ. ಚಿತ್ರಕ್ಕೆ ದೇಸೀ ಮೋಹನ್ ಸಂಗೀತ ನೀಡಿದ್ದಾರೆ. ಸಂಕಲನ ಶ್ರೀಕಾಂತ್, ವಾಗೀಶ್ ಚನ್ನಗಿರಿ ಗೀತ ಸಾಹಿತ್ಯ ನೀಡಿದ್ದಾರೆ. ಚಿತ್ರದ ಹಾಡುಗಳಿಗೆ ಖ್ಯಾತ ಗಾಯಕರಾದ ಕೈಲಾಶ್ ಖೇರ್,  ಕೀರವಾಣಿ, ವಿಜಯ್ ಪ್ರಕಾಶ್, ಸಂಜಿತ್ ಹೆಗ್ಡೆ ಧ್ವನಿಯಾಗಿದ್ದಾರೆ. ಶೀಘ್ರದಲ್ಲಿಯೇ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಕೆ ಆರ್ ಹೊಯ್ಸಳ ಅವರು ತಿಳಿಸಿದ್ದಾರೆ.

 

ಜುಲೈ 29 ಕ್ಕೆ ತೆರೆಗೆ ಬರಲಿದೆ ವಿಭಿನ್ನ ಕಥೆಯ “ರಕ್ಕಂ”

 

Share this post:

Related Posts

To Subscribe to our News Letter.

Translate »