ನಟಿ ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಹಾಟ್ ಟಾಪಿಕ್ ಆಗಿದ್ದಾರೆ. ಇತ್ತೀಚೆಗಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಪೋಸ್ಟ್ ಮಾಡಿದ್ದು ಸದ್ಯ ಈ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಕಿಡಿ ಹಚ್ಚಿದ್ದು, ಫುಲ್ ವೈರಲ್ ಆಗುತ್ತಿದೆ. ಕನ್ನಡ ಸಿನಿಮಾಗಳ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಬಾಲಿವುಡ್ನಲ್ಲಿ ಸಹ ಬ್ಯುಸಿ ಹೀರೋಯಿನ್ ಆಗಿದ್ದಾರೆ. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ, ಚಮಕ್, ಪುಷ್ಪ, ಗೀತಾ ಗೋವಿಂದಂ ಮುಂತಾದ ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿ ಉತ್ತಮ ಹೆಸರುಗಳಿಸಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾದ ಯಶಸ್ಸಿನೊಂದಿಗೆ, ರಶ್ಮಿಕಾ ಮಂದಣ್ಣ ಕ್ರೇಜ್ ತುಂಬಾ ಹೆಚ್ಚಾಗಿದೆ. ದಕ್ಷಿಣದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಾಯಕಿಯರಲ್ಲಿ ರಶ್ಮಿಕಾ ಕೂಡ ಒಬ್ಬರು. ಈ ಬ್ಯೂಟಿಯ ಹೊಸ ಫೋಟೋಶೂಟ್ನ ಚಿತ್ರಗಳು ಇಲ್ಲಿವೆ.