Left Ad
ಪುನೀತ್ ರಾಜಕುಮಾರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಲಿದೆ 'ರತ್ನ' ಚಿತ್ರದ ಟ್ರೇಲರ್ . - Chittara news
# Tags

ಪುನೀತ್ ರಾಜಕುಮಾರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಲಿದೆ ‘ರತ್ನ’ ಚಿತ್ರದ ಟ್ರೇಲರ್ .

ಚಿತ್ರದಲ್ಲಿ ನಾಯಕಿ ಪುನೀತ್ ರಾಜಕುಮಾರ್ ಅಭಿಮಾನಿ ಆಗಿರುತ್ತಾಳೆ.‌ ಅಪ್ಪು ಅಭಿಮಾನಿಯ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ ಎಂದು ನಿರ್ದೇಶಕ ಬಸವರಾಜ್ ಬಳ್ಳಾರಿ ತಿಳಿಸಿದ್ದಾರೆ.ಇತ್ತೀಚಿಗೆ “ರತ್ನ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಪ್ರಮಾಣಪತ್ರ ನೀಡಿದೆ. ಏಪ್ರಿಲ್ ನಲ್ಲಿ ಚಿತ್ರ ತೆರೆಗೆ ಬರಲಿದೆ.

ಇದನ್ನೂ ಓದಿ ಯಶಸ್ವಿಯಾಗಿ 25 ದಿನ ಪೂರೈಸಿದ ವಿನಯ್-ಸುನಿ ಸಿನಿಮಾ..ಒಂದು ಸರಳ ಪ್ರೇಮಕಥೆ ಒಟಿಟಿ ಎಂಟ್ರಿ ಯಾವಾಗ?

ನಿರ್ದೇಶಕ ಬಸವರಾಜ್ ಬಳ್ಳಾರಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿದ್ದಾರೆ. ಸತೀಶ್ ಬಾಬು ಸಂಗೀತ ನಿರ್ದೇಶನ, ಸತೀಶ್ ಗಂಗಾವತಿ ಛಾಯಾಗ್ರಹಣ ಹಾಗೂ ನಾಗೇಂದ್ರ ಅರಸ್ ಅವರ ಸಂಕಲನವಿರುವ ಈ ಚಿತ್ರದ ಸಹ ನಿರ್ಮಾಪಕರು ಮಂಜುನಾಥ್ ಎಂ ಹಾಗೂ ರಾಘವೇಂದ್ರ ಕರೂರ್.

ಇದನ್ನೂ ಓದಿ

ಹರ್ಷಲ ಹನಿ(ನಾಯಕಿ), ವರ್ಧನ್, ಆನಂದ್ ಅಪ್ಪು, ಬಾಲರಾಜ್ ಒಡೆಯರ್, ನಾಗೇಂದ್ರ ಅರಸ್, ಅಮಿತ್ ರಾವ್, ಸಾರಿಕಮ್ಮ, ರಾಣಿ ಬಸವರಾಜ್, ಸುಚಿತ್ ಚೌವ್ಹಾಣ್, ರಾಮು ಕರೂರ್, ಮಂಜು ದೈವಜ್ಞ ಮುಂತಾದವರು “ರತ್ನ” ಚಿತ್ರದ ತಾರಾಬಳಗದಲ್ಲಿದ್ದಾರೆ.

Spread the love
Translate »
Right Ad