ಹುಚ್ಚು ಅಭಿಮಾನದಿಂದ ಭದ್ರತಾ ಉಲ್ಲಂಘನೆ ಮಾಡಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿಯ ಕಾಲು ಹಿಡಿದಿದ್ದ ಅಭಿಮಾನಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾನೆ. ಆತನ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿವೆ. ಆತ ಯಾರು? ಎಲ್ಲಿಂದ ಬಂದಿದ್ದ? ಕೊಹ್ಲಿ ಕ್ರೀಸ್ಗೆ ಹೋಗುತ್ತಿದ್ದಂತೆ ಗ್ರಿಲ್ ಹಾರಿ ಮೈದಾನಕ್ಕೆ ನುಗ್ಗಿದ್ದರ ಬಗ್ಗೆ ಆತ ಹೇಳಿದ್ದೇನು ಎಂಬ ಮಾಹಿತಿ ಇಲ್ಲಿದೆ.
ಬೆಂಗಳೂರು, ಮಾರ್ಚ್ 25: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಸೋಮವಾರ ರಾತ್ರಿ ನಡೆದ ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ (RCB vs PBKS) ನಡುವಣ ಐಪಿಎಲ್ (IPL) ಪಂದ್ಯ ಭದ್ರತಾ ಉಲ್ಲಂಘನೆಗೂ ಸಾಕ್ಷಿಯಾಗಿತ್ತು. ಆರ್ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಬ್ಯಾಟಿಂಗ್ಗೆ ಕ್ರೀಸ್ಗೆ ಬರುತ್ತಿದ್ದಂತೆಯೇ ವ್ಯಕ್ತಿಯೊಬ್ಬ ಕ್ರೀಡಾಂಗಣದ ಗ್ರಿಲ್ ಹಾರಿ ಕ್ರೀಸ್ ಬಳಿ ಬಂದು ಕೊಹ್ಲಿಯ ಕಾಲು ಹಿಡಿದಿದ್ದ! ತಕ್ಷಣ ಆತನನ್ನು ವಶಕ್ಕೆ ಪಡೆದಿದ್ದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಆ ವ್ಯಕ್ತಿ ಯಾರು? ಆತ ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬಂದಿದ್ದು ಹೇಗೆ, ಆತನ ಉದ್ದೇಶ ಏನಿತ್ತು ಎಂಬ ಎಲ್ಲ ವಿವರವನ್ನು ಪೊಲೀಸರು ಕಲೆ ಹಾಕಿದ್ದಾರೆ. ಅಲ್ಲದೆ, ಆತನ ವಿರುದ್ಧ ಪ್ರಕರಣವನ್ನೂ ದಾಖಲಿಸಿದ್ದಾರೆ.
ಮೈದಾನಕ್ಕೆ ನುಗ್ಗಿ ಕೊಹ್ಲಿಯ ಕಾಲು ಹಿಡಿದಿದ್ದ ಅಭಿಮಾನಿಯ ವಿಚಾರಣೆ ನಡೆಸಲಾಗಿದ್ದು, ಆತ ರಾಯಚೂರಿನಿಂದ ಬಂದಿದ್ದ ಅಪ್ರಾಪ್ತ ಎಂಬುದು ತಿಳಿದುಬಂದಿದೆ. ರೈಲಿನಲ್ಲಿ ರಾಯಚೂರಿನಿಂದ ಬಂದಿದ್ದ 17 ವರ್ಷದ ಅಪ್ರಾಪ್ತ, 3000 ರೂಪಾಯಿ ಕೊಟ್ಟು ಡಿ ಬ್ಲಾಕ್ ಟಿಕೆಟ್ ಖರೀದಿ ಮಾಡಿದ್ದ. ಈತ ವಿರಾಟ್ ಕೊಹ್ಲಿಯ ಹುಚ್ಚು ಅಭಿಮಾನಿಯಾಗಿದ್ದಾನೆ.
ಇದನ್ನೂ ಓದಿ : Holi Festival: ಹೋಳಿ ಹಬ್ಬದಂದು ಕಲರ್ ಕಲರ್ ಹಾಡಿಗೆ ನಟಿ ಸುಧಾರಾಣಿ ಮಸ್ತ್ ಸ್ಟೆಪ್ಸ್
ಕೊಹ್ಲಿ ಕ್ರೀಸ್ಗೆ ಹೋಗುತ್ತಿದ್ದಂತೆ ನಡೆದಿದ್ದೇನು?
ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ನೀಡಿದ್ದ 177 ರನ್ಗಳ ಗೆಲುವಿನ ಗುರಿಯನ್ನು ಬೆನ್ನತ್ತಲು ಕೊಹ್ಲಿ ಹಾಗೂ ಡುಪ್ಲೆಸಿಸ್ ಕ್ರೀಸ್ಗೆ ತೆರಳುತ್ತಿದ್ದರು. ಅಷ್ಟರಲ್ಲಿ ಯುವಕ ಮೈದಾನಕ್ಕೆ ಜಿಗಿದಿದ್ದ. ಆ ಬಗ್ಗೆ ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ನೀಡಿರುವ ಆತ, ಕೊಹ್ಲಿ ಕ್ರೀಸ್ಗೆ ಹೋಗುತ್ತಿದ್ದಂತೆ ಹಿಂಬದಿ ಸೀಟ್ನಲ್ಲಿದ್ದವರು ‘ಕೊಹ್ಲಿಯನ್ನು ಹಿಡಿದುಕೋ’ ಎಂದು ಕೂಗುತ್ತಿದ್ದರು. ಅದನ್ನು ಕೇಳಿದ ತಕ್ಷಣ ಗ್ರಿಲ್ ಹಾರಿ ಮೈದಾನದ ಒಳಗೆ ನುಗ್ಗಿದ್ದೆ ಎಂದಿದ್ದಾನೆ.
ಇದೀಗ ರಾಯಚೂರಿನ ಅಪ್ರಾಪ್ತನ ಮೇಲೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಕರ್ತವ್ಯಕ್ಕೆ ಅಡ್ಡಿ, ಮೈದಾನಕ್ಕೆ ಅತಿಕ್ರಮಣ ಪ್ರವೇಶದಡಿ ಕೇಸ್ ದಾಖಲಿಸಿದ್ದಾರೆ. ಕೇಸ್ ದಾಖಲಿಸಿಕೊಂಡು ಆತನ ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್ .
ಪಂಜಾಬ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 49 ಎಸೆತಗಳಲ್ಲಿ 77 ರನ್ ಗಳಿಸಿ ಆರ್ಸಿಬಿ ಗೆಲುವಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. ಕೊಹ್ಲಿ ಇನ್ನಿಂಗ್ಸ್ನಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್ಗಳು ಒಳಗೊಂಡಿದ್ದವು. ಅದಕ್ಕೂ ಮೊದಲು ಫೀಲ್ಡಿಂಗ್ನಲ್ಲಿ ಸಹ ಕೊಹ್ಲಿ ಮಿಂಚಿದ್ದರು. ಪಂದ್ಯವನ್ನು ಆರ್ಸಿಬಿ ತಂಡ 4 ವಿಕೆಟ್ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ ಟೂರ್ನಿಯಲ್ಲಿ 2 ಪಂದ್ಯಗಳನ್ನಾಡಿರುವ ಆರ್ಸಿಬಿ ಒಂದರಲ್ಲಿ ಸೋಲನುಭವಿಸಿದ್ದು, ಇನ್ನೊಂದರಲ್ಲಿ ಗೆಲುವು ಸಾಧಿಸಿದಂತಾಗಿದೆ.
A fan breached the field and touched Virat Kohli's feet.
– King Kohli, an icon! ❤️pic.twitter.com/s82xq8sKhW
— Mufaddal Vohra (@mufaddal_vohra) March 25, 2024