ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಆಹ್ವಾನಿತ ಗಣ್ಯರ ಪಟ್ಟಿಯಲ್ಲಿ ಸ್ಯಾಂಡಲ್ ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೆಸರೂ ಸೇರ್ಪಡೆಯಾಗಿದೆ.ಜನವರಿ 22 ರಂದು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ರಾಮಮಂದಿರ ಟ್ರಸ್ಟ್ ದೇಶದ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಹ್ವಾನವಿತ್ತಿದೆ.
ಸುಮಾರು 6 ಸಾವಿರ ಗಣ್ಯರನ್ನು ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ಈ ಪಟ್ಟಿಯಲ್ಲಿ ಸುಮಾರು 250 ಮಂದಿ ಕನ್ನಡಿಗರಿದ್ದಾರೆ. ಅವರಲ್ಲಿ ರಿಷಬ್ ಶೆಟ್ಟಿ ಕೂಡಾ ಸೇರಿದ್ದಾರೆ ಎಂಬ ಮಾತು ಕೇಳಿಬಂದಿದೆ ಕಾಂತಾರ ಸಿನಿಮಾ ಮೂಲಕ ಇಡೀ ರಾಷ್ಟ್ರದ ಗಮನ ಸೆಳೆದಿದ್ದ ರಿಷಬ್ ಶೆಟ್ಟಿಗೂ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ಸಿಕ್ಕಿದೆ ಎಂಬ ಟ್ವೀಟ್ ಎಲ್ಲೆಡೆ ವೈರಲ್ ಆಗಿದೆ. ಆದರೆ ಈ ಬಗ್ಗೆ ಸ್ವತಃ ರಿಷಬ್ ಶೆಟ್ಟಿ ಅಧಿಕೃತವಾಗಿ ಹೇಳಿಲ್ಲ. ರಿಷಬ್ ಜೊತೆಗೆ ಕರ್ನಾಟಕ ಮೂಲದ 250 ಕನ್ನಡಿಗ ಸಾಧಕರನ್ನು ಆಹ್ವಾನಿಸಲಾಗಿದೆ ಎನ್ನಲಾಗುತ್ತಿದೆ.