Sandalwood Leading OnlineMedia

ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್ ಚಿತ್ರದಲ್ಲಿ ರಿಷಬ್ ಶೆಟ್ಟಿ

2027ರ ಜನವರಿ 21ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್

ರಾಷ್ಟ್ರ ಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಈಗ ಮತ್ತೊಂದು ದೊಡ್ಡ ಸಿನಿಮಾದ ಭಾಗವಾಗಿದ್ದಾರೆ. ಇತಿಹಾಸದ ಪುಟಗಳಲ್ಲಿ ಛಾಪು ಮೂಡಿಸಿರುವ, ಭಾರತದ ಹೆಮ್ಮೆ, ಮರಾಠ ಸಾಮ್ರಾಜ್ಯದ ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಮಹಾರಾಜ್ ಅವರ ಕಥೆಯೀಗ ಸಿನಿಮಾ ರೂಪ ಪಡೆದುಕೊಳ್ಳುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ Bagheera Review: ಸಾಮಾನ್ಯನೊಬ್ಬನ ಅಸಾಮಾನ್ಯ ಕಥೆ!

ಅದರಂತೆ, ದಿ ಪ್ತೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ, ಶಿವಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಬಾಲಿವುಡ್ ನ ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದಾರೆ. ಇದೀಗ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಶಿವಾಜಿಯ ಲುಕ್ ನಲ್ಲಿ ರಗಡ್ ಆಗಿಯೇ ರಿಷಬ್ ಕಾಣಿಸಿಕೊಂಡಿದ್ದಾರೆ.

ಸದ್ಯ ಈ ಐತಿಹಾಸಿಕ ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಜತೆಗೆ ಫಸ್ಟ್ ಲುಕ್ ಪೋಸ್ಟರ್ ಜತೆಗೆ ಸಿನಿಮಾದ ರಿಲೀಸ್ ದಿನಾಂಕವನ್ನೂ ಚಿತ್ರತಂಡ ಬಿಡುಗಡೆ ಮಾಡಿದೆ. 2027ರ ಜನವರಿ 21 ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಹಿಂದಿ, ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

 

 

 

Share this post:

Translate »