Sandalwood Leading OnlineMedia

ಫೆ. 10ಕ್ಕೆ ಬಿಡುಗಡೆಯಾಗಲಿದೆ ವಿಜಯ್​ ಜಗದಾಲ್​ ನಟನೆ-ನಿರ್ದೇಶನದ ‘ರೂಪಾಯಿ’

ವಿಜಯ್​ ಜಗದಾಲ್​ ಮೊದಲ ಬಾರಿಗೆ ನಟಿಸಿ-ನಿರ್ದೇಶಿಸಿರುವ ‘ರೂಪಾಯಿ’ ಚಿತ್ರವು ಫೆ.10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕಳೆದ ವಾರವಷ್ಟೇ ಚಿತ್ರದ ಟ್ರೈಲರ್​ ಬಿಡುಗಡೆಯಾಗಿ ಜನರ ಮೆಚ್ಚುಗೆ ಪಡೆಯುತ್ತಿದೆ, ಈಗ ‘ಉಸಿರಾಟ’ ಎಂಬ ಹೊಸ ಹಾಡು ಬಿಡುಗಡೆಯಾಗಿದ್ದು. ಈ ಹಾಡಿಗೂ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯೂಟ್ಯೂಬ್​ನ ಆನಂದ್​ ಆಡಿಯೋ ಚಾನಲ್​ನಲ್ಲಿ ಬಿಡುಗಡೆಯಾಗಿರುವ ‘ಉಸಿರಾಟ’ ಹಾಡನ್ನು ವ್ಯಾಸರಾಜ ಸೋಸಲೆ ಹಾಡಿದ್ದು, ಆನಂದ್​ ರಾಜಾವಿಕ್ರಮ್​ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ನಟ-ನಿರ್ದೇಶಕ ವಿಜಯ್​ ಜಗದಾಲ್​ ಅವರೇ ಈ ಚಿತ್ರಕ್ಕೆ ಸಾಹಿತ್ಯ ರಚಿಸಿದ್ದಾರೆ.

ಮತ್ತೆ ತೆರೆಮೇಲೆ ಬರುತ್ತಾ ಚಾಲೆಂಜಿಂಗ್ ಸ್ಟಾರ್ ದರ್ಶನ್ – ಓಂ ಪ್ರಕಾಶ್ ರಾವ್ ಕಾಂಬಿನೇಷನ್ ಸಿನಿಮಾ

‘ರೂಪಾಯಿ’ ಒಂದು ಪಕ್ಕಾ ಮನರಂಜನಾತ್ಮಕ ಚಿತ್ರವಾಗಿದ್ದು, ಒಂದು ಕಮರ್ಷಿಯಲ್​ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳೂ ಈ ಚಿತ್ರದಲ್ಲಿದೆಯಂತೆ. ‘ಪ್ರೇಕ್ಷಕರಿಗೆ ಎಲ್ಲೂ ಬೋರ್ ಆಗದ ಹಾಗೆ ಚಿತ್ರಕಥೆ ಮಾಡಿದ್ದು, ಹಣದ ಮೌಲ್ಯದ ಕುರಿತು ನಗುವಿನ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇವೆ. ಇಲ್ಲಿ ನಗಿಸುವುದಕ್ಕೆ ಯಾವುದೇ ಪ್ರತ್ಯೇಕ ಪಾತ್ರಗಳಿಲ್ಲ. ಸನ್ನಿವೇಶಗಳೇ ನಗು ಉಕ್ಕಿಸುವಂತಿದೆ’ ಎನ್ನುತ್ತಾರೆ ವಿಜಯ್​ ಜಗದಾಲ್​. ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ಅವರೇ ರಚಿಸಿದ್ದಾರೆ.

ರಮ್ಯಾ, ರಚಿತಾ ರಾಮ್ ನನ್ನ ಕ್ರಶ್ ಎಂದ್ರು ಬಿಗ್ ಬಾಸ್ ಸೀಸನ್ 9 ವಿನ್ನರ್ ರೂಪೇಶ್ ಶೆಟ್ಟಿ!

ಈ ಚಿತ್ರದ ಕುರಿತು ಮಾತನಾಡುವ ವಿಜಯ್​ ಜಗದಾಲ್​, ‘ಇದೊಂದು ರೆಗ್ಯುಲರ್​ ಚಿತ್ರ ಅಲ್ಲ. ಐದು ಜನರ ಸುತ್ತ ಸುತ್ತುವ ಕಥೆ ಇಲ್ಲಿದೆ. ಅವರಿಗೆ ಆಕಸ್ಮಿಕವಾಗಿ ಒಂದಿಷ್ಟು ಹಣ ಸಿಗುತ್ತದೆ. ಒಂದ ದೊಡ್ಡ ಹಗರಣಕ್ಕೆ ಸಂಬಂಧಿಸಿದ ಹಣ, ಮಧ್ಯಮ ವರ್ಗದ ಜನರಿಗೆ ಸಿಕ್ಕಾಗ ಅವರ ಜೀವನದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದರ ಕುರಿತು ಹೇಳುವುದಕ್ಕೆ ಹೊರಟಿದ್ದೇವೆ. ದುಡ್ಡಿಗಿಂತ ಸಂಬಂಧಗಳ ಕುರಿತಾದ ಚಿತ್ರ ಇದು. ಆ ದುಡ್ಡು ಸಂಬಂಧಗಳನ್ನು ಹೇಗೆ ಹಾಳು ಮಾಡುತ್ತದೆ ಎಂದು ಹೇಳುವ ಚಿತ್ರ ಇದು’ ಎಂದು ಹೇಳುತ್ತಾರೆ.

ಲೋಕೇಶ್‌ ಕನಗರಾಜ್‌ &  ದಳಪತಿ ವಿಜಯ್‌ ಕಾಂಬಿನೇಶನ್‌ನ ಎರಡನೇ ಸಿನಿಮಾ

ವಿವಿಧ್​ ಸಿನಿಮಾಸ್​ ಬ್ಯಾನರ್​ನಡಿ ಮಂಜುನಾಥ್​ ಎಂ, ಹರೀಶ್​ ಬಿ.ಕೆ ಮತ್ತು ವಿನೋದ ಎನ್​ ಜಂಟಿಯಾನಿ ನಿರ್ಮಿಸಿರುವ ಈ ಚಿತ್ರದಲ್ಲಿ ವಿಜಯ್ ಜಗದಾಲ್​ ಜೊತೆಗೆ ಕೃಷಿ ತಾಪಂಡ, ಯಶ್ವಿಕ್​, ‘ಮೈತ್ರಿ’ ಜಗದೀಶ್​, ಶಂಕರ್​ ಮೂರ್ತಿ, ರಾಮ್​ ಚಂದನ್​, ಚಂದನಾ ರಾಘವೇಂದ್ರ, ಪ್ರಮೋದ್​ ಶೆಟ್ಟಿ, ರಾಕ್​ಲೈನ್​ ಸುಧಾಕರ್​, ಮೋಹನ್​ ಜನೇಜ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಆನಂದ್ ರಾಜವಿಕ್ರಮ್​ ಅವರ ಸಂಗೀತ, ಆರ್​.ಡಿ. ನಾಗಾರ್ಜುನ್​ ಅವರ ಛಾಯಾಗ್ರಹಣ ಮತ್ತು ಶಿವರಾಜ್​ ಮೇಹು ಅವರ ಸಂಕಲನವಿದೆ.

Share this post:

Related Posts

To Subscribe to our News Letter.

Translate »