ಸಾಯಿ ಪಲ್ಲವಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಎರಡು ದಿನ ಕಂಪ್ಲೀಟ್ ರೆಸ್ಟ್ ಮಾಡಲೇಬೇಕಾಗಿದೆ ಎಂದು ವೈದ್ಯರು ಹೇಳಿದ್ದಾರಂತೆ. ಈ ವಿಚಾರ ತಿಳಿದ ಫ್ಯಾನ್ಸ್ ಕಂಗಲಾಗಿದ್ದಾರೆ. ತಮ್ಮ ನೆಚ್ಚಿನ ನಟಿಗೆ ಏನಾಯ್ತು ಅಂತ ಆಘಾತಕ್ಕೆ ಒಳಗಾಗಿದ್ದಾರೆ.
ನಟಿಗೆ ಎರಡು ದಿನಗಳ ಕಾಲ ಸಂಪೂರ್ಣ ಬೆಡ್ ರೆಸ್ಟ್ ಅನ್ನು ಸೂಚಿಸಲಾಗಿದೆ ಎನ್ನುವುದು ತಿಳಿದಿದೆ.ಜ್ವರ ಬಂದ ನಂತರ ನಟಿ ತುಂಬಾ ಸುಸ್ತಾಗಿದ್ದಾರಂತೆ. ಡೆಕ್ಕನ್ ಕ್ರಾನಿಕಲ್ ಪ್ರಕಾರ ನಿರ್ದೇಶಕ ಚಂದೂ ಮೊಂಡೇಟಿ ಅವರು ಸಾಯಿ ಪಲ್ಲವಿ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. ಮುಂಬೈನಲ್ಲಿ ನಡೆದ ತಾಂಡೆಲ್ ಹಿಂದಿ ಟ್ರೈಲರ್ ಬಿಡುಗಡೆಗೆ ನಟಿ ಹಾಜರಾಗಬೇಕಿತ್ತು ಎನ್ನಲಾಗಿದೆ. ಈ ಕಾರ್ಯಕ್ರಮದಲ್ಲಿ ಅಮೀರ್ ಖಾನ್ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು.
ಆದರೆ ಪ್ರಚಾರ ಚಟುವಟಿಕೆಗಳಿಗಾಗಿ ನಟಿ ಆಗಾಗ ನಿರಂತರವಾಗಿ ವಿವಿಧ ನಗರಗಳಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಆದರೆ ನಟಿ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ವೈದ್ಯರು ಅವರಿಗೆ ಕನಿಷ್ಠ 2 ದಿನಗಳ ಕಾಲ ಸಂಪೂರ್ಣ ಬೆಡ್ ರೆಸ್ಟ್ ಅನ್ನು ಸೂಚಿಸಲಾಗಿದೆ.ಸಾಯಿ ಪಲ್ಲವಿ ಮುಂಬೈನಲ್ಲಿ ತಾಂಡೇಲ್ ಹಿಂದಿ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿಲ್ಲ. ನಿಜವಾಗಿ ಇಂದು ಮುಂಬೈನಲ್ಲಿ ನಡೆದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಸಾಯಿ ಪಲ್ಲವಿ ಇರಬೇಕಿತ್ತು. ಆದರೆ ದುರದೃಷ್ಟವಶಾತ್ ಅವರು ಅಸ್ವಸ್ಥರಾಗಿದ್ದಾರೆ. ಹೀಗಾಗಿ ತಾಂಡೆಲ್ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಅವರು ರಿವೀಲ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಸಾಯಿ ಪಲ್ಲವಿ ಮತ್ತೊಮ್ಮೆ ನಾಗ ಚೈತನ್ಯ ಅವರಿಗೆ ಜೋಡಿಯಾಗಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.