Sandalwood Leading OnlineMedia

ಸಲಾರ್ ಎರಡನೇ ಟ್ರೈಲರ್ ಲಾಂಚ್ ಗೆ ಅದ್ಧೂರಿ ಈವೆಂಟ್

ಪ್ರಭಾಸ್ ನಾಯಕರಾಗಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಬಹುನಿರೀಕ್ಷಿತ ಸಲಾರ್ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ.

ಇದೇ ತಿಂಗಳ ಅಂತ್ಯಕ್ಕೆ ಸಲಾರ್ ಸಿನಿಮಾ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರತಂಡ ಒಂದು ಟ್ರೈಲರ್ ಲಾಂಚ್ ಮಾಡಿದೆ. ಮೊನ್ನೆಯಷ್ಟೇ ಬಿಡುಗಡೆಯಾದ ಟ್ರೈಲರ್ ದಾಖಲೆಯ ವೀಕ್ಷಣೆ ಕಂಡಿದೆ.
ಚಿತ್ರದಲ್ಲಿ ಇಬ್ಬರು ಸ್ನೇಹಿತರ ಕತೆಯಿದೆ ಎನ್ನುವುದು ಸ್ಪಷ್ಟವಾಗಿದೆ. ಇದೀಗ ಚಿತ್ರತಂಡ ಸಿನಿಮಾ ಬಿಡುಗಡೆಗೆ ಮುನ್ನ ಎರಡನೇ ಟ್ರೈಲರ್ ಬಿಡುಗಡೆ ಮಾಡಲಿದೆ ಎಂಬ ಸುದ್ದಿಯಿದೆ. ಡಿಸೆಂಬರ್ 16 ಅಥವಾ 18 ರಂದು ಅದ್ಧೂರಿ ಕಾರ್ಯಕ್ರಮದ ಮೂಲಕ ಎರಡನೇ ಟ್ರೈಲರ್ ಲಾಂಚ್ ಮಾಡುವ ಸಾಧ‍್ಯತೆಯಿದೆ.

ಚಿತ್ರ ಈಗಾಗಲೇ ಸೆನ್ಸಾರ್ ಮಂಡಳಿ ಮುಂದೆ ಬಂದಿದ್ದು, ಹಿಂಸಾತ್ಮಕ ದೃಶ್ಯಗಳಿರುವ ಕಾರಣ ಎ ಸರ್ಟಿಫಿಕೇಟ್ ಸಿಕ್ಕಿದೆ ಎನ್ನಲಾಗಿದೆ. ಇದನ್ನು ಇನ್ನೂ ಚಿತ್ರತಂಡ ಬಹಿರಂಗಪಡಿಸಿಲ್ಲ.

Share this post:

Related Posts

To Subscribe to our News Letter.

Translate »