Left Ad
ಮದುವೆ ನಂತರ ಹೊಸ ಅವತಾರದಲ್ಲಿ ಸಮಂತಾ; ಫಸ್ಟ್ ಲುಕ್ ರಿಲೀಸ್ - Chittara news
# Tags

ಮದುವೆ ನಂತರ ಹೊಸ ಅವತಾರದಲ್ಲಿ ಸಮಂತಾ; ಫಸ್ಟ್ ಲುಕ್ ರಿಲೀಸ್

ಎರಡು ವರ್ಷಗಳ ಗ್ಯಾಪ್ ಬಳಿಕ ನಟಿ ಸಮಂತಾ ರುತ್ ಪ್ರಭು ಅವರು ಮತ್ತೆ ಬೆಳ್ಳಿತೆರೆ ಮೇಲೆ ಬರುತ್ತಿದ್ದಾರೆ. ಅವರು ನಟಿಸಿದ ‘ಮಾ ಇಂಟಿ ಬಂಗಾರಂ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿದೆ. ಜನವರಿ 9ರಂದು ಈ ಸಿನಿಮಾದ ಟೀಸರ್ ಕೂಡ ಬಿಡುಗಡೆ ಆಗಲಿದೆ. ಸಿನಿಮಾ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ.

ಸೋಶಿಯಲ್ ಮೀಡಿಯಾದಲ್ಲಿ ಸಮಂತಾ ರುತ್ ಪ್ರಭು ಅವರು ‘ಮಾ ಇಂಟಿ ಬಂಗಾರಂ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಮುಖ್ಯ ಪಾತ್ರದಲ್ಲಿ ನಟಿಸುವುದರ ಜೊತೆಗೆ ಸಮಂತಾ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ತಮ್ಮದೇ ಪ್ರೊಡಕ್ಷನ್ ಹೌಸ್ ಮೂಲಕ ಬಂಡವಾಳ ಹೂಡಿದ್ದಾರೆ. ಆ ಕಾರಣದಿಂದಲೂ ಅವರಿಗೆ ಈ ಸಿನಿಮಾ ತುಂಬಾ ಸ್ಪೆಷಲ್ ಆಗಿದೆ.

‘ಮಾ ಇಂಟಿ ಬಂಗಾರಂ’ ಸಿನಿಮಾದ ಫಸ್ಟ್ ಲುಕ್​​ನಲ್ಲಿ ಸಮಂತಾ ಅವರು ಸೀರೆ ಧರಿಸಿ ಕಾಣಿಸಿಕೊಂಡಿದ್ದಾರೆ. ಗ್ಲಾಮರ್ ಪಾತ್ರವನ್ನು ಬಿಟ್ಟು ಅವರು ರಫ್ ಆ್ಯಂಡ್ ಟಫ್ ಪಾತ್ರ ಮಾಡಿದ್ದಾರೆ. ವಿಲನ್​​ಗಳ ಮೂಳೆ ಮುರಿಯಲು ಸಜ್ಜಾಗಿರುವ ದುರ್ಗೆಯ ರೀತಿ ಅವರು ಪೋಸ್ ನೀಡಿದ್ದಾರೆ. ಸಮಂತಾ ರುತ್ ಪ್ರಭು ಅಭಿಮಾನಿಗಳು ಈ ಸಿನಿಮಾ ಮೇಲೆ ಭರವಸೆ ಇಟ್ಟುಕೊಂಡಿದ್ದಾರೆ.

ಈ ಪೋಸ್ಟರ್ ನೋಡಿದ ಅಭಿಮಾನಿಗಳು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಲೇಡಿ ಬಾಸ್ ಮರಳಿ ಬಂದಿದ್ದಾರೆ’, ‘ಸಮಂತಾ ಅವರ ಕಮ್​ಬ್ಯಾಕ್ ಬಹಳ ಮಾಸ್ ಆಗಿದೆ’ ಎಂಬಿತ್ಯಾದಿ ಕಮೆಂಟ್​ಗಳು ಬಂದಿವೆ. ಫ್ಯಾನ್ಸ್ ಪುಟಗಳಲ್ಲಿ ಈ ಪೋಸ್ಟರ್ ವೈರಲ್ ಆಗುತ್ತಿದೆ. ಬಿ.ವಿ. ನಂದಿನಿ ರೆಡ್ಡಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

Spread the love
Translate »
Right Ad