ಸ್ಯಾಂಡಲ್ವುಡ್ ನಟ ಪ್ರಜ್ವಲ್ ದೇವರಾಜ್ ಅವರುಇನ್ನಿಲ್ಲ ಎಂಬ ಸುದ್ದಿ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿದೆ. ‘ಪ್ರಜ್ವಲ್ ದೇವರಾಜ್ ಇನ್ನಿಲ್ಲ. ಓಂ ಶಾಂತಿ ಎಂಬ ಕ್ಯಾಪ್ಷನ್ನೊಂದಿಗೆ ಪ್ರಜ್ವಲ್ ದೇವರಾಜ್ ಅವರ ಸಿನಿಮಾದ ಫೋಟೊವನ್ನು ಹಾಕಿ ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ.
ಈ ಸುದ್ದಿ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಆದರೆ ಇದೊಂದು ಸುಳ್ಳು ಸುದ್ದಿ ಎಂದು ಕುಟುಂಬಸ್ಥರೆ ಸ್ಪಷ್ಟನೆ ನೀಡಿದ್ದಾರೆ.
ʻʻನಟ ಪ್ರಜ್ವಲ್ ದೇವರಾಜ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿಗಳನ್ನ ಹಬ್ಬಿಸಲಾಗಿದೆ. ಪ್ರಜ್ವಲ್ ದೇವರಾಜ್ ಅವರ ಪೋಟೋಗಳನ್ನ ದುರ್ಬಳಕೆ ಮಾಡಲಾಗಿದೆ.. ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ವದಂತಿಗಳು ಸಲ್ಲದು.
ಇದರಿಂದಾಗಿ ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ಆತಂಕ ಉಂಟಾಗುತ್ತದೆ. ಕಿಡಿಗೇಡಿಗಳು ಪ್ರಜ್ವಲ್ ದೇವರಾಜ್ ಆರೋಗ್ಯದ ಬಗ್ಗೆ ಅನಗತ್ಯ ಸುಳ್ಳು ವದಂತಿ ಹಬ್ಬಿಸಿದ್ದಾರೆʼʼಎಂದು ಕುಟುಂಬ ಮಾಹಿತಿ ಹಂಚಿಕೊಂಡಿದೆ.
ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ‘ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ’ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.
ಈ ಹಿಂದೆ ಕೂಡ ಹಲವರು ಸ್ಟಾರ್ ಗಳ ಸಾವಿನ ಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ಹಬ್ಬಿಸಿದ್ದರು. ದ್ವಾರಕೀಶ್ ಅವರ ವಿಚಾರದಲ್ಲೂ ಹಾಗೇ ಆಗಿದೆ. ಇದೀಗ ಪ್ರಜ್ವಲ್ ದೇವರಾಜ್ ಅವರಿಗೆ ಏನು ಆಗಿಲ್ಲ, ಅಭಿಮಾನಿಗಳು ಗಾಬರಿಯಾಗಬೇಡಿ ಎಂದು ಕುಟುಂಬಸ್ಥರೆ ಹೇಳಿದ್ದಾರೆ.