Sandalwood Leading OnlineMedia

ಬಿಡುಗಡೆಯಾಯ್ತು ಪ್ರೇಕ್ಷಕರನ್ನು ಬೆರಗಾಗಿಸುವಂಥ `ಸಾರಾಂಶ’ ಟ್ರೈಲರ್!

ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಹಾಡುಗಳ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಆ ಮೂಲಕ ಸಿನಿಮಾ ಮೇಲೆ ಮೂಡಿಕೊಂಡಿದ್ದ ಕುತೂಹಲ ತಣಿಸುವಂತೆ ಇದೀಗ ಟ್ರೈಲರ್ ಬಿಡುಗಡೆಗೊಂಡಿದೆ. ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ, ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಸಾರಾಂಶ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದ್ದಾರೆ. ಈ ಟ್ರೈಲರ್ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಾ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಅಂದಹಾಗೆ, ಈ ಚಿತ್ರ ಇದೇ ಫೆಬ್ರವರಿ 15ರಂದು ತೆರೆಗಾಣಲಿದೆ.

ಇದನ್ನೂ ಓದಿ ಹೀರೋ ಶರಣ್ “ಜಸ್ಟ್ ಪಾಸ್ “ಗೆ ಫಸ್ಟ್ ಕ್ಲಾಸ್ ಹಾಡೋದನ್ನ ಹಾಡಿದ್ದಾರೆ

`ಸಾರಾಂಶ’ದ ಬಗೆಗಿನ ಒಂದಷ್ಟು ವಿಚಾರಗಳನ್ನು ಚಿತ್ರತಂಡ ಹಂತ ಹಂತವಾಗಿ ಜಾಹೀರು ಮಾಡಿತ್ತು. ಇದೀಗ ಒಂದಿಡೀ ಸಿನಿಮಾದ ಆಂತರ್ಯವನ್ನು ತೆರೆದಿಡುವಂಥಾ ಟ್ರೈಲರ್ ಲಾಂಚ್ ಆಗಿದೆ. ವರ್ಷಾಂತರಗಳ ಹಿಂದೆ ಬಿಡುಗಡೆಗೊಂಡು, ಇಂದಿಗೂ ಆ ಪ್ರಭೆ ಉಳಿಸಿಕೊಂಡಿರುವ ಲೂಸಿಯಾ ಚಿತ್ರತಂಡದ ಸದಸ್ಯರು ಈ ಪತ್ರಿಕಾಗೋಷ್ಠಿಯ ಪ್ರಮುಖ ಆಕರ್ಷಣೆಯಾಗಿದ್ದರು. ಶ್ರುತಿ ಹರಿಹರನ್, ಹೇಮಂತ್ ರಾವ್ ಮಾತ್ರವಲ್ಲದೇ ಈ ಚಿತ್ರದ ನಿರ್ದೇಶಕರಾದ ಸೂರ್ಯ ವಸಿಷ್ಠ ಕೂಡಾ ಲೂಸಿಯಾ ಭಾಗವಾಗಿದ್ದವರೆ. ಇವರೆಲ್ಲರ ಸಮ್ಮುಖದಲ್ಲಿ ಸಾರಾಂಶ ಟ್ರೈಲರ್ ಬಿಡುಗಡೆಗೊಂಡಿದೆ.

ಇದನ್ನೂ ಓದಿ ಅನೀಶ್ ಮೀಟ್ ಚಿರು…ಆರಾಮ್ ಅರವಿಂದ ಸ್ವಾಮಿ ಸಿನಿಮಾ ಕಂಟೆಂಟ್ ನೋಡಿ ಏನಂದ್ರು ಮೆಗಾಸ್ಟಾರ್..?

ಈ ಪತ್ರಿಕಾ ಗೋಷ್ಠಿಯಲ್ಲಿ ಶ್ರುತಿ ಹರಿಹರನ್, ದೀಪಕ್ ಸುಬ್ಮಣ್ಯ, ಸೂರ್ಯ ವಸಿಷ್ಠ, ಸಂಗೀತ ನಿರ್ದೇಶಕ ಉದಿತ್ ಹರಿತಾಸ್, ರವಿ ಭಟ್, ಶ್ವೇತಾ ಗುಪ್ತ ಮುಂತಾದವರು ಹಾಜರಿದ್ದರು. ಅಂದಹಾಗೆ, ಇದು ಈ ದಿನಮಾನಕ್ಕೆ ಅತ್ಯಂತ ಅಪರೂಪವೆಂಬಂಥಾ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಿತ್ರ. ನಿರ್ದೇಶಕ ಸೂರ್ಯ ವಸಿಷ್ಠ ಅವರೇ ಪ್ರಧಾನ ಪಾತ್ರಗಳಲ್ಲೊಂದಕ್ಕೆ ಜೀವ ತುಂಬಿದ್ದಾರೆ. ದೀಪಕ್ ಸುಬ್ರಮಣ್ಯ ವಿಶಿಷ್ಟ ಪಾತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲಿದ್ದಾರೆ. ಶ್ರುತಿ ಹರಿಹರನ್ ಮಾಯಾ ಎಂಬ ಪಾತ್ರವನ್ನು ಒಳಗಿಳಿಸಿಕೊಂಡಿದ್ದಾರೆ. ಈ ಎಲ್ಲ ಪಾತ್ರಗಳ ಝಲಕ್ಕುಗಳು ಸದರಿ ಟ್ರೈಲರ್ ನಲ್ಲಿ ಕಾಣಿಸಿಕೊಂಡಿವೆ.

ಇದನ್ನೂ ಓದಿ ಟ್ರೇಲರ್ ನಲ್ಲಿ ಜೂನಿ…ಫೆಬ್ರವರಿ 9ಕ್ಕೆ ತೆರೆಗೆ ಬರ್ತಿದೆ ಪೃಥ್ವಿ ಅಂಬಾರ್ ಸಿನಿಮಾ..

ಈ ಸಿನಿಮಾದ ಎಲ್ಲ ಪಾತ್ರಗಳೂ ವಿಶೇಷವಾಗಿವೆ ಎಂಬುದಕ್ಕೆ ಈ ಟ್ರೈಲರ್ ನಲ್ಲಿ ಪುರಾವೆಗಳು ಸಿಗುತ್ತವೆ. ಅದರಲ್ಲೊಂದು ಪಾತ್ರವನ್ನು ಶ್ವೇತಾ ಗುಪ್ತ ನಿರ್ವಹಿಸಿದ್ದಾರೆ. ಕನ್ನಡತನದ ಬಗ್ಗೆ ಅತೀವ ಪ್ರೀತಿ ಆಸಕ್ತಿ ಇಟ್ಟುಕೊಂಡಿರೋ ಕನ್ನಡೇತರ ಬುಕ್ ಪಬ್ಲಿಷರ್ ಪಾತ್ರವಿದೆ. ಆ ಪಾತ್ರದ ಬಗ್ಗೆ ನಿರ್ದೇಶಕರು ಈ ಪತ್ರಿಕಾ ಗೋಷ್ಠಿಯಲ್ಲಿ ಒಂದಷ್ಟು ವಿವರಗಳನ್ನು ಬಿಚ್ಚಿಟ್ಟಿದ್ದಾರೆ. ಸದರಿ ಟ್ರೈಲರ್‍ನಲ್ಲಿ ಪ್ರಧಾನವಾಗಿ ಎರಡು ಬೊಂಬೆ ಪಾತ್ರಗಳು ನೋಡುಗರನ್ನು ಸೆಳೆದುಕೊಂಡಿವೆ. ಅದನ್ನು ರಾಮ್ ಪ್ರಸಾದ್ ಬಾಣಾವರ ಮತ್ತು ಸತೀಶ್ ಕುಮಾರ್ ನಿರ್ವಹಿಸಿದ್ದಾರೆ. ಅದು ಟ್ರೈಲರ್ ನ ಪ್ರಮುಖ ಆಕರ್ಷಣೆಯಾಗಿಯೂ ಗಮನ ಸೆಳೆಯುವಂತಿದೆ. ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಮತ್ತು ಕ್ಲಾಪ್ ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರ ತಾರಾಗಣ, ಉದಿತ್ ಹರಿತಾಸ್ ಸಂಗೀತ ನಿರ್ದೇಶನ, ಅಪರಾಜಿತ್ ಹಿನ್ನೆಲೆ ಸಂಗೀತ ಮತ್ತು ಪ್ರದೀಪ್ ನಾಯಕ್ ಸಂಕಲನ ಈ ಚಿತ್ರಕ್ಕಿದೆ. ಸಾರಾಂಶದ ಮೂಲಕ ಅನಂತ್ ಭಾರದ್ವಾಜ್ ಎಂಬ ಪ್ರತಿಭಾನ್ವಿತ ಛಾಯಾಗ್ರಾಹಕ ಪರಿಚಯವಾಗುತ್ತಿದ್ದಾರೆ. ಅವರ ಛಾಯಾಗ್ರಹಣ ಕೂಡಾ ಸಾರಾಂಶದ ಶಕ್ತಿಯಂತಿದೆ ಎಂಬುದು ಚಿತ್ರತಂಡದ ಭರವಸೆ…

 

Share this post:

Related Posts

To Subscribe to our News Letter.

Translate »