Sandalwood Leading OnlineMedia

*ಶಾರುಖ್ ಖಾನ್ ಆಸ್ಪತ್ರೆಗೆ ದಾಖಲು, ಶೂಟಿಂಗ್ ವೇಳೆ ಪೆಟ್ಟು,*

 ಚಿತ್ರೀಕರಣದಲ್ಲಿ ತೊಡಗಿದ್ದ ವೇಳೆ ನಟ ಶಾರುಖ್ ಖಾನ್ ಗೆ ಗಾಯವಾಗಿದ್ದು ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಠಾಣ್ ಸಿನಿಮಾದ ಸೂಪರ್ ಸಕ್ಸಸ್ ಬಳಿಕ ಸಾಲು ಸಾಲು ಸಿನಿಮಾಗಳ ಶೂಟಿಂಗ್ ನಲ್ಲಿ ಕಿಂಗ್ ಖಾನ್ ಬ್ಯುಸಿಯಾಗಿದ್ದು ಈ ಮಧ್ಯೆ ಚಿತ್ರೀಕರಣದ ವೇಳೆ ಗಾಯಗೊಂಡಿದ್ದು ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ.ಪಠಾಣ್’ ಸಿನಿಮಾದ ಸಕ್ಸಸ್ ಬಳಿಕ ನಟ ಶಾರುಖ್ ಖಾನ್ ಜವಾನ್ ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೆಲಸಗಳಲ್ಲಿ ಶಾರುಖ್ ಬ್ಯುಸಿಯಾಗಿದ್ದು ಈ ಮಧ್ಯೆ ಶಾರುಖ್ ಪೆಟ್ಟು ಮಾಡಿಕೊಂಡಿರುವ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಶಾರುಖ್ ಖಾನ್ ಮೂಗಿಗಿ ಏಟಾಗಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನೂ ಓದಿ : *ಪ್ರಶಾಂತ್ ನೀಲ್ ನಿರ್ದೇಶನದ ಸಾಲಾರ್ ಮೇಲೆ ಅಭಿಮಾನಿಗಳ ಕಾತರ*

ಶಾರುಖ್ ಖಾನ್ ಮುಂಬರುವ ಸಿನಿಮಾ ಶೂಟಿಂಗ್‌ವೊಂದಕ್ಕಾಗಿ ಭಾಗಿಯಾಗಿದ್ದರು. ಲಾಸ್ ಏಂಜಲೀಸ್‌ನಲ್ಲಿ ಶಾರುಖ್ ಚಿತ್ರೀಕರಣದಲ್ಲಿದ್ದಾಗ ಅವರ ಮೂಗಿಗೆ ಏಟಾಗಿ ರಕ್ತ ಸುರಿದಿದೆ. ಕೂಡಲೇ ನಟನನ್ನು ಆಸ್ಪತ್ರೆಗೆ ದಾಖಲಿಸಿ, ಶಸ್ತಚಿಕಿತ್ಸೆಯನ್ನು ಮಾಡಲಾಗಿದ್ದು ಯಾವುದೇ ಹೆದರುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಶಾರುಖ್ ಖಾನ್ ತಮ್ಮ ಮುಂಬೈ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ

Share this post:

Related Posts

To Subscribe to our News Letter.

Translate »