ಗೀತಾಶಿವರಾಜಕುಮಾರ್ ಹಾಗೂ ಜೀ ಸ್ಟುಡಿಯೋಸ್ ನಿರ್ಮಿಸಿರುವ, ಎ.ಹರ್ಷ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ವೇದ” ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. “ವೇದ” ಶಿವರಾಜಕುಮಾರ್ ಅವರು ನಾಯಕರಾಗಿ ನಟಿಸಿರುವ 125 ನೇ ಚಿತ್ರ .
ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರಕ್ಕೆ ಸ್ವಾಮಿ ಜೆ ಗೌಡ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ ಹಾಗೂ ರವಿವರ್ಮ, ವಿಕ್ರಮ್ ಮೋರ್, ಚೇತನ್ ಡಿಸೋಜ , ಅರ್ಜುನ್ ರಾಜ್ ಸಾಹಸ ನಿರ್ದೇಶನವಿದೆ. ರವಿ ಸಂತೆಹಕ್ಲು ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.
ಶಿವರಾಜಕುಮಾರ್, ಗಾನವಿ ಲಕ್ಷ್ಮಣ್, ಉಮಾಶ್ರೀ, ಅದಿತಿ ಸಾಗರ್, ಶ್ವೇತ ಚಂಗಪ್ಪ, ಚೆಲುವರಾಜು, ರಾಘು ಶಿವಮೊಗ್ಗ, ವಿನಯ್ ಬಿದ್ದಪ್ಪ, ಪ್ರಸನ್ನ, ಕುರಿ ಪ್ರತಾಪ್, ಲಾಸ್ಯ ನಾಗರಾಜ್, ಭರತ್ ಸಾಗರ್, ಸಂಜೀವ್, ಚಾರ್ವಿ ಗೌಡ, ಜಗಪ್ಪ, ಚೇತನ ಹರಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.