Sandalwood Leading OnlineMedia

ಕುತೂಹಲ ಮೂಡಿಸಿದ ಶಿವರಾಜ್‌ಕುಮಾರ್ ಹೊಸ ಚಿತ್ರದ ಕಾನ್ಸೆಪ್ಟ್ ಪೋಸ್ಟರ್!

*ಇನ್ನೊಂದು ಹೊಸ ಚಿತ್ರದಲ್ಲಿ ಶಿವಣ್ಣ* . *ಹುಟ್ಟುಹಬ್ಬಕ್ಕೆ ಕಾನ್ಸೆಪ್ಟ್ ಪೋಸ್ಟರ್ ಬಿಡುಗಡೆ* ‘ಕರುನಾಡ ಚಕ್ರವರ್ತಿ’ ಶಿವರಾಜಕುಮಾರ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊಸದೊಂದು ಚಿತ್ರವನ್ನು ಅವರು ಒಪ್ಪಿಕೊಂಡಿದ್ದು, ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಈ ಚಿತ್ರದಲ್ಲಿನ ಅವರ ಪಾತ್ರದ ಕಾನ್ಸೆಪ್ಟ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಇನ್ನೂ ಓದಿ *ಪುರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಸಿನಿಮಾದ ಅಪ್ ಡೇಟ್…ಸೆಟ್ಟೇರಿದ ಡಬಲ್ ಇಸ್ಮಾರ್ಟ್….2024ರ ಶಿವರಾತ್ರಿಗೆ ಚಿತ್ರ ರಿಲೀಸ್*

ಈ ಹಿಂದೆ ತಮಿಳಿನಲ್ಲಿ ವಿಕ್ರಮ್ ಪ್ರಭು ಅಭಿನಯದ ‘ಪಾಯುಮ್ ಒಳಿ ನೀ ಎನಕ್ಕು’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸುಧೀರ್ ಚಂದ್ರ ಫಿಲಂ ಕಂಪನಿ ಮೂಲಕ ಸುಧೀರ್ ಚಂದ್ರ ಪದಿರಿ ನಿರ್ಮಿಸುತ್ತಿದ್ದಾರೆ. ಇದು ಅವರು ಕನ್ನಡದಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರವಾಗಿದೆ. ‘ವಿಕ್ರಮ್ ವೇದ’ ಮತ್ತು ‘ಕೈದಿ’ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದ ಸ್ಯಾಮ್ ಸಿ.ಎಸ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಇನ್ನೂ ಓದಿ *ಆಗಸ್ಟ್ 10ಕ್ಕೆ ಕನ್ನಡ, ತಮಿಳು, ತೆಲುಗು ಭಾಷೆಯಲ್ಲಿ ‘ಜೈಲರ್’ ರಿಲೀಸ್…ಥಿಯೇಟರ್ ನಲ್ಲಿ ಹಬ್ಬ ಮಾಡೋದಿಕ್ಕೆ ತಲೈವ್ ಫ್ಯಾನ್ಸ್ ರೆಡಿ*

ಇದೊಂದು ಆಕ್ಷನ್ ಚಿತ್ರವಾಗಿದ್ದು, ದಕ್ಷಿಣ ಭಾರತದ ಜನಪ್ರಿಯ ನಟ-ನಟಿಯರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವು ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಸದ್ಯದಲ್ಲೇ ಈ ಚಿತ್ರದ ಹೆಚ್ಚಿನ ವಿವರಗಳು ಹೊರಬೀಳಲಿವೆ.

Share this post:

Related Posts

To Subscribe to our News Letter.

Translate »