ಚಿತ್ರ ಮತ್ತು ಪಾತ್ರಗಳಿಗಿಂತ ಹೆಚ್ಚು ವಿವಾದಗಳಿಂದ ಸುದ್ದಿಯಾದವರು ಸಿದ್ಧಾರ್ಥ್. ಕೇಂದ್ರ ಸರ್ಕಾರದ ವಿರುದ್ಧ ಆಗಾಗ ಕೆಂಡವನ್ನು ಕಾರುತ್ತಾ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗುತ್ತಾ ಬಂದವರಲ್ಲಿ ಸಿದ್ಧಾರ್ಥ್ ಕೂಡ ಒಬ್ಬರು ಮತ್ತು ಪ್ರಮುಖರು.
ತ್ತೀಚೆಗೆ ಹೈದ್ರಾಬಾದ್‌ನಲ್ಲಿ ನಡೆದ ಸಾಹಿತ್ಯೋತ್ಸವದಲ್ಲಿ ಸಿದ್ಧಾರ್ಥ್ ಭಾಗಿಯಾಗಿದ್ದರು. ಇದೇ ಸಮಯದಲ್ಲಿ ಮಾತನಾಡಿರುವ ಸಿದ್ಧಾರ್ಥ್ ಪುಸ್ತಕಗಳ ಮೇಲೆ ತಮಗೆ ಇರುವ ಒಲವು ಹೇಳಿಕೊಂಡಿದ್ದಾರೆ. ತಮ್ಮ ಪತ್ನಿ ಆದಿತಿ ರಾವ್ ಹೈದರಿ ಅವರ ತಾಯಿ ವಿದ್ಯಾ ರಾವ್ ಅವರ ಜೊತೆ ಸಂವಾದ ನಡೆಸಿದ್ದಾರೆ. ಆ ನಂತರ ನೆರೆದ ಜನರ ಜೊತೆ ಸಂವಾದವನ್ನು ನಡೆಸಿದ ಸಿದ್ಧಾರ್ಥ್ ಇದೇ ಸಮಯದಲ್ಲಿ ಬಂದ ಅವಕಾಶಗಳನ್ನೆಲ್ಲ ನಾನು ಒಪ್ಪಿಕೊಂಡಿದ್ದರೆ ದೊಡ್ಡ ಸೂಪರ್ ಸ್ಟಾರ್ ಆಗಿರುತ್ತಿದ್ದೆ ಎಂದು ಹೇಳಿದ್ದಾರೆ.
ನನಗೆ ಅವಕಾಶಗಳು ಬಂದಿಲ್ಲ ಅಂತೇನು ಇಲ್ಲ. ಬಂದಿದ್ದವು ಈಗಲೂ ಬರುತ್ತವೆ ಆದರೆ ಆ ಚಿತ್ರಗಳಲ್ಲಿ ಹುಡುಗಿಯರಿಗೆ ಹೊಡೆಯುವ, ಚುಡಾಯಿಸುವ, ಸೊಂಟದ ಮೇಲೆ ಕೈಯಾಡಿಸುವ ಸನ್ನಿವೇಶಗಳಿರುತ್ತವೆ ಎಂದಿರುವ ಸಿದ್ಧಾರ್ಥ್ ಹುಡುಗಿಯರು ಹೇಗಿರಬೇಕು ಎಂದು ಹೇಳುವ ಕೆಲ ಕೊಳಕು ಮನಸ್ಥಿತಿಯ ಕಥೆಗಳನ್ನು ನಾನು ಕೇಳಿದ್ದೇನೆ ಎಂದಿದ್ದಾರೆ. ಇಂತಹ ಚಿತ್ರಗಳನ್ನು ಪಾತ್ರಗಳನ್ನು ಮಾಡಲು ನನಗೆ ಮೊದಲಿಂದ ಇಷ್ಟ ಇಲ್ಲ ಹೀಗಾಗಿ ನಾನು ಮಾಡಲಿಲ್ಲ, ಒಂದು ವೇಳೆ ಈ ಕೆಲಸಗಳನ್ನು ನಾನು ಮಾಡಿದ್ದರೆ ನಾನು ಕೂಡ ಇವತ್ತು ದೊಡ್ಡ ಸೂಪರ್ ಸ್ಟಾರ್ ಆಗಿರುತ್ತಿದ್ದೆ ಎಂದು ಹೇಳಿದ್ದಾರೆ.