Left Ad
ಸೆ.28 ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ರಿಲೀಸ್ - Chittara news
# Tags

ಸೆ.28 ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ರಿಲೀಸ್

ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ, ಈಗ ತಂಡ ಸಿನಿಮಾ ರಿಲೀಸ್ ದಿನಾಂಕವನ್ನು ಎರಡು ವಾರ ಮುಂದಕ್ಕೆ ಹಾಕಿದೆ. ಅರ್ಥಾತ್, ಸೆಪ್ಟೆಂಬರ್ 28ರಂದು ಚಿತ್ರ ರಿಲೀಸ್ ಮಾಡಲು ಪ್ಲ್ಯಾನ್ ರೂಪಿಸಿಕೊಂಡಿದೆ.


ಬೋಯಪಾಟಿ ಶ್ರೀನು ಆಕ್ಷನ್ ಕಟ್ ಹೇಳಿರುವ ಆಕ್ಷನ್ ಎಂಟರ್ ಟೈನರ್ ಸ್ಕಂದ ಸಿನಿಮಾದ ಟ್ರೇಲರ್ ಹಾಗೂ ಹಾಡುಗಳು ಭಾರೀ ಸದ್ದು ಮಾಡಿವೆ. ಪ್ರೀ ರಿಲೀಸ್ ವ್ಯವಹಾರದಲ್ಲಿಯೂ ದಾಖಲೆ ಬರೆದಿರುವ ಈ ಚಿತ್ರವನ್ನು ಶ್ರೀನಿವಾಸ್ ಸಿಲ್ವರ್ ಸ್ಕ್ರೀನ್ ಬ್ಯಾನರ್ ಅಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ.

 

ಇಷ್ಟು ದಿನಗಳ ಕಾಲ ಲವರ್ ಬಾಯ್ ಆಗಿ ಮಿಂಚಿದ್ದ ರಾಮ್ ಪೋತಿನೇನಿ ಮೊದಲ ಬಾರಿಗೆ ಸ್ಕಂದ ಸಿನಿಮಾದಲ್ಲಿ ಮಾಸ್ ಅವತಾರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಕನ್ನಡತಿ ಶ್ರೀಲೀಲಾ, ರಾಮ್‌ಗೆ ಜೋಡಿಯಾಗಿ ನಟಿಸಿದ್ದಾರೆ. ಸಂತೋಷ್ ಡಿಟೇಕ್ ಕ್ಯಾಮೆರಾ ವರ್ಕ್, ತಮನ್ ಎಸ್‌ಎಸ್ ಮ್ಯೂಸಿಕ್ ಕಿಕ್ ಈ ಚಿತ್ರಕ್ಕಿದೆ. ಜೀ ಸ್ಟುಡಿಯೋಸ್ ಸೌತ್ ಹಾಗೂ ಪವನ್ ಕುಮಾರ್ ಅರ್ಪಿಸುತ್ತಿರುವ ಸ್ಕಂದ ಸಿನಿಮಾವನ್ನು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ. ಸೆಪ್ಟೆಂಬರ್ 28ರಂದು ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಸ್ಕಂದ ಸಿನಿಮಾ ತೆರೆ ಕಾಣುತ್ತಿದೆ.‌

Spread the love
Translate »
Right Ad