Sandalwood Leading OnlineMedia

ವೆಂಕಟ್ ಭಾರದ್ವಾಜ್ ನಿರ್ದೇಶನದ ` ಶ್ರೀರಂಗ’ ಚಿತ್ರದ ಫಸ್ಟ್ ಲುಕ್ ರಿಲೀಸ್

 

 

ಕನ್ನಡ ಚಿತ್ರರಂಗದಲ್ಲಿ ರಂಗ ಅಂದತಕ್ಷಣ ನೆನಪಾಗುವುದೇ ಹಾಲು ಜೇನು ಚಿತ್ರದ ಡಾ.ರಾಜ್ ಪಾತ್ರ ರಂಗ, ಹಾಗೇಯೇ ಮನೆದೇವ್ರು ಸಿನಿಮಾದಲ್ಲಿ ರವಿಚಂದ್ರನ್  ಶ್ರೀರಂಗ, ಇತ್ತೀಚೆಗೆ ಉಪೇಂದ್ರ ನಟನೆಯ ಸಿನಿಮಾ ಸೂಪರ್ ರಂಗ..ಇದೀಗ ವೆಂಕಟ್ ಭಾರದ್ವಾಜ್ ಶ್ರೀರಂಗ ಟೈಟಲ್ ಮೂಲಕ ಹೊಸದೊಂದು ಕಥೆ ಹೇಳಲು ಬರ್ತಿದ್ದು, ಸದ್ಯ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.

 

ಶ್ರೀರಂಗ ಕಾಮಿಡಿ ಜೊತೆಗೆ ಕ್ರೈ ಥ್ರಿಲ್ಲರ್ ಸಿನಿಮಾವಾಗಿದ್ದು, ವೆಂಕಟ್ ಭಾರದ್ವಾಜ್ ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ನಾಯಕನಾಗಿ ಶಿನವ್, ನಾಯಕಿಯರಾಗಿ ರಚನಾ ರಾಯ್, ರೂಪ ರಾಯಪ್ಪ ಹಾಗೂ ವಂದನಾ ಶೆಟ್ಟಿ ನಟಿಸಿದ್ದು, ಉಳಿದಂತೆ ಗುರುರಾಜ್ ಹೊಸಕೋಟೆ, ಯಮುನಾ ಶ್ರೀನಿಧಿ, ಸಾಗರ್ ಜಯರಾಮ್, ಚಿಪ್ಸ್ ಬಾಬು, ಗಿರೀಶ್, ಮಣಿ ಮಾರನ್ ಅಭಿನಯಿಸಿದ್ದಾರೆ. ಇವರ ಜೊತೆಗೆ ಪುಟಾಣಿಗಳ ದಂಡೇ ಇದೆ. ಮಾಸ್ಡರ್ ಚಿರಾಯು ಚಕ್ರವರ್ತಿ, ತ್ರಿಧಾರ ಲಕ್ಷ್ಮಣ್, ಪುಶ್ಕಲ್ ಪ್ರೀತ್, ರಜತ್ ರಿತಿಕ್, ಐಶಾನಿ ನಟಿಸಿದ್ದಾರೆ.

 

ಹೆಚ್ಚಿನ ಓದಿಗಾಗಿ;- `ನಾಯಿ ಇದೆ ಎಚ್ಚರಿಕೆ’ ಚಿತ್ರೀಕರಣ ಮುಕ್ತಾಯ

 

ವೆಂಕಟ್ ಭಾರದ್ವಾಜ್

 

ಮಿಥುನ್ ಛಾಯಾಗ್ರಾಹಣ, ಚಂದನ್ ಸಂಕಲನ, ಶಂಕರ್ ರಾಮನ್ ಸಂಭಾಷಣೆ, ಸಮೀರ್ ಕುಲಕರ್ಣಿ ಸಂಗೀತ, ಕನ್ನಡದ ಟಾಪ್  ರಪೆರ್ ವಿರಾಜಕನ್ನಡಿಗ, ಅವಿನಾಶ್ ಛೆಬ್ಬಿ, ಚೈತ್ರಾ ನಾಣಯ್ಯ ಹಾಡುಗಳಿಗೆ ಧ್ವನಿಯಾಗಿದ್ದಾರೆ. ರುತು ಕ್ರಿಯೇಷನ್ ನಡಿ ಸುಮಾ ಸಿಆರ್ ನಿರ್ಮಾಣ ಮಾಡಿದ್ದು, ಬಿಎಂ ದಿಲೀಪ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸೆನ್ಸಾರ್ ಮುಗಿಸಿರುವ ಸಿನಿಮಾ ಶೀರ್ಘದಲ್ಲಿಯೇ ಥಿಯೇಟರ್ ಗೆ ಲಗ್ಗೆ ಇಡಲಿದೆ.

 

 

Share this post:

Related Posts

To Subscribe to our News Letter.

Translate »