ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುವಲ್ಲಿ ಸದಾ ಮುಂದು. ಅಥರ್ವ್ ನಾಯಕರಾಗಿ ನಟಿಸಿರುವ “ಟೇಲ್ಸ್ ಆಫ್ ಮಹಾನಗರ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಟೀಸರ್ ಗೆ ಸುದೀಪ್ ಧ್ವನಿ ನೀಡಿದ್ದಾರೆ. ಟೀಸರ್ ಜನರ ಮೆಚ್ಚುಗೆ ಗಳಿಸಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಸೆಪ್ಟೆಂಬರ್ 15 ರಂದು ಚಿತ್ರ ತೆರೆಗೆ ಬರಲಿದೆ.ನಾಯಕ ಅಥರ್ವ್, ಈ ಹಿಂದೆ “ಗೆಜ್ಜೆನಾದ”, ” ನಂದ ಲವ್ಸ್ ನಂದಿತಾ”, “ಕನ್ನಡದ ಕಂದ”, “ಆಟ” ಮುಂತಾದ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಬಿ.ಎನ್ ವಿಜಯ್ ಕುಮಾರ್(ಗೆಜ್ಜೆನಾದ) ಅವರ ಪುತ್ರ. “ಗೆಜ್ಜೆನಾದ” ವಿಜಯಕುಮಾರ್ ಎಂದೇ ಖ್ಯಾತರಾಗಿರುವ ವಿಜಯಕುಮಾರ್ ಈ ಚಿತ್ರವನ್ನು ಅಥರ್ವ್ ಪಿಕ್ಚರ್ಸ್ ಲಾಂಛನದಲ್ಲಿ ಧರ್ಮೇಂದ್ರ ಎಂ ರಾವ್ ಅವರೊಟ್ಟಿಗೆ ಸೇರಿ ನಿರ್ಮಾಣವನ್ನು ಮಾಡಿದ್ದಾರೆ.
ಇನ್ನೂ ಓದಿ *ಶ್ರೀ ಸುನಿಲ್ ಸಿ ಸ್ ಅವರಿಗೆ ಚಿತ್ತಾರ ವತಿಯಿಂದ ಹುಟ್ಟುಹಬ್ಬದ ಶುಭಾಶಯಗಳು*
ಇದು ಮಹಾನಗರವೊಂದರಲ್ಲಿ ನಡೆಯುವ ಕಥೆಯಾಗಿದೆ. ಹೆಣ್ಣು, ಅಧಿಕಾರ ಹಾಗೂ ಧರ್ಮಕ್ಕೆ ಸಂಬಂಧಿಸಿದ ಹಾಗೆ ಮೂರು ವಿಭಿನ್ನ ಕಥೆಗಳು ಚಿತ್ರದಲ್ಲಿದೆ. ಅಥರ್ವ್ ಅವರೆ ಕಥೆ ಬರೆದಿದ್ದಾರೆ. ಚಿತ್ರಕಥೆ ಅಥರ್ವ್ ಹಾಗೂ ರಾಜೀವ್ ಕಿರಣ್ ವೆನಿಯಲ್ ಅವರದು. “ಕನ್ನಡತಿ” ಧಾರಾವಾಹಿ ರೆಮೋಲ, ಸಂಪತ್ ಮೈತ್ರೇಯ, ಬಿ.ಸುರೇಶ್, ರೂಪಾ ರಾಯಪ್ಪ, ಆಶೀಶ್, ಬಿ.ಎಂ.ವೆಂಕಟೇಶ್, ಮೋಹನ್, ಆರ್ ಜೆ ಅನೂಪ, ನಾಗರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.ರಾಜೀವ್ ಕಿರಣ್ ವೆನಿಯಲ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರೌಶನ್ ಜಾ ಛಾಯಾಗ್ರಹಣ, ಪ್ರದೀಪ್ ಗೋಪಾಲ್ ಸಂಕಲನ ಹಾಗೂ ಸಿದ್ಧಾರ್ಥ್ ಪರಾಶರ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.