Sandalwood Leading OnlineMedia

ಚಿತ್ರೀಕರಣ ಮುಗಿಸಿದ ‘Supplier ಶಂಕರ’ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿ..ಇದು ‘ಗಂಟುಮೂಟೆ’ ಹೀರೋ ಹೊಸ ಸಿನಿಮಾ

ಗಂಟುಮೂಟೆ, ಟಾಮ್ ಅಂಡ್ ಜೆರ್ರಿ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ನಾಯಕ ನಿಶ್ಚಿತ್ ಕೊರೋಡಿ Supplier ಶಂಕರ ಎಂಬ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಯುವ ಪ್ರತಿಭೆ ರಂಜಿತ್ ಸಿಂಗ್ ರಜಪೂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ತ್ರಿನೇತ್ರ ಫಿಲ್ಮಂಸ್ ಸಂಸ್ಥೆಯಡಿ ಎಂ.ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿರುವ Supplier ಶಂಕರ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಟೈಟಲ್ ಹೇಳುವಂತೆ ಒಬ್ಬ ಬಾರ್ Supplier ಸುತ್ತಾ ಇಡೀ ಸಿನಿಮಾ ಸಾಗುತ್ತದೆ.

ಇದನ್ನೂ ಓದಿ:  32 ವರ್ಷ ಬಳಿಕ ಮತ್ತೆ ಒಂದಾದ ತಲೈವಾ-ಬಿಗ್ ಬಿ

ನಿಶ್ಚಿತ್ ಗೆ ಜೋಡಿಯಾಗಿ ಲಗೋರಿ ಸಿನಿಮಾ ಖ್ಯಾತಿಯ ದೀಪಿಕಾ ಆರಾಧ್ಯ ನಟಿಸಿದ್ದು, ಗೋಪಾಲ ಕೃಷ್ಣ ದೇಶಪಾಂಡೇ, ಜ್ಯೋತಿ ರೈ, ನವೀನ್ ಡಿ ಪಡಿಲ್ ಸೇರಿದಂತೆ ಒಂದಷ್ಟು ಹೊಸಬರು ಚಿತ್ರದಲ್ಲಿದ್ದಾರೆ. Supplier ಶಂಕರ ಸಿನಿಮಾಗೆ ರಂಜಿತ್, ಕಥೆ , ಚಿತ್ರಕಥೆ, ಸಂಭಾಷಣೆ ಜೊತೆಗೆ ಸಾಹಿತ್ಯದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ವಿಜಯ್ ಪ್ರಕಾಶ್, ಅಮ್ಮ ನನ್ನೀ ಈ ಜನುಮ ಖ್ಯಾತಿಯ ಸುನಿಲ್ ಕಶ್ಯಪ್, ಮೋಹನ್ ಬಿನ್ನಿಪೇಟೆ, ಸಂತೋಷ್ ವೆಂಕಿ, ನಕುಲ್ ಅಭಯ್ಯಂಕರ್, ಐಶ್ವರ್ಯ ರಂಗರಾಜನ್ ಹಾಡುಗಳಿಗೆ ಧ್ವನಿಯಾಗಿದ್ದು, ರವಿ ಬಸ್ರೂರ್ ಬಳಿ ಕೆಲಸ ಮಾಡಿರುವ ಆರ್.ಬಿ.ಭರತ್ ಸಂಗೀತ ನೀಡಿದ್ದಾರೆ. ಸತೀಶ್ ಚಂದ್ರಯ್ಯ ಸಂಕಲನ, ಸತೀಶ್ ಕುಮಾರ್.ಎ ಛಾಯಾಗ್ರಹಣ, ಬಾಲಾಜಿ ಕಲಾ ನಿರ್ದೇಶನ Supplier ಶಂಕರ್ ಸಿನಿಮಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ವರ್ಷಾಂತ್ಯಕ್ಕೆ ಸಿನಿಮಾವನ್ನು ತೆರೆಗೆ ತರವು ಯೋಜನೆ ಹಾಕಿಕೊಂಡಿದೆ.

Share this post:

Related Posts

To Subscribe to our News Letter.

Translate »