ಕನ್ನಡದ ರ್ಯಾಪರ್ ಅಂತ ಅಂದ್ರೆ ಎಲ್ಲರಿಗೂ ಗೊತ್ತಾಗೋದು ಚಂದನ್ ಶೆಟ್ಟಿ ಅವರ ಹಾಡುಗಳನ್ನ ಕೇಳದ ಜನರಿಲ್ಲಾ, ಪಡ್ಡೆ ಹುಡುಗರ ಮತ್ತು ಹುಡುಗಿಯರ ಮನಗೆದ್ದ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ ಹಾಗೂ *ಮೈ ಮೂವಿ ಬಜಾರ್ ಖ್ಯಾತಿ ನವರಸನ್ ಅವರ ನಿರ್ಮಾಣದ ಚಿತ್ರ *”ಸೂತ್ರಧಾರಿ”. ಈಗಾಗಲೆ 90% ಸಿನೆಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು ಚಿತ್ರದ ಮೊದಲ ಹಾಡಿನ ಚಿತ್ರೀಕರಣ ಇನೋವೇಟೀವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿಯಾಗಿ ಸೆಟ್ಟೆರಿದೆ.
ಈ ಚಿತ್ರದ ಹೀರೋ ಇಂಟ್ರೊಡಕ್ಷನ್ ಸಾಂಗ್ ಆಗಿದ್ದು ಸಂಗೀತ ನಿರ್ದೇಶಕ ಮತ್ತು ಗಾಯಕನಾಗಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ,.ಈ ಹಾಡಿನಲ್ಲಿ ಮೊದಲಬಾರಿಗೆ ಚಂದನ್ ಶೆಟ್ಟಿ ಜೋಡಿಯಾಗಿ ಸಲಗ ಖ್ಯಾತಿಯ ಸಂಜನಾ ಆನಂದ್ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಾಡು ಇದೇ ಡಿಸೆಂಬರ್ 27ರಂದು ಬೆಳಗ್ಗೆ 10.35ಕ್ಕೆ ಬಿಡುಗಡೆಯಾಗಲಿದೆ.ಈ ಹಾಡು ಹೊಸ ವರ್ಷದ ಸಂಭ್ರಮಾಚರಣೆಗೆ ಹೇಳಿ ಮಾಡಿಸಿದ ಹಾಗಿದೆ.