Sandalwood Leading OnlineMedia

ಸಾಯಿ ದುರ್ಗಾ ತೇಜ್ ಸಿನಿಮಾಗೆ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಸಾಥ್

ತೆಲುಗು ಚಿತ್ರರಂಗದ ಪ್ರತಿಭಾನ್ವಿತ ನಟರಲ್ಲಿ ಒಬ್ಬರು ಸಾಯಿ ದುರ್ಗಾ ತೇಜ್. ವಿರೂಪಾಕ್ಷ ಚಿತ್ರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿದ್ದ ಸಾಯಿ ದುರ್ಗಾ ತೇಜ್ ಈಗ ಸಿಕ್ಸ್ ಪ್ಯಾಕ್ ಅವತಾರದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮೆಗಾ ಸುಪ್ರೀಂ ಹೀರೋ ನಟನೆಯ ಸಂಬರಾಲ ಏಟಿಗಟ್ಟು ಸಿನಿಮಾದ ಟೈಟಲ್ ಟೀಸರ್ ನ್ನು ಇತ್ತೀಚೆಗಷ್ಟೇ ಹೈದ್ರಾಬಾದ್ ನಲ್ಲಿ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಬಿಡುಗಡೆ ಮಾಡಿದರು.

                 ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಜನವರಿಯಲ್ಲಿ ಮನರಂಜಿಸಲು ಬರುತ್ತಿದೆ ವಿನೂತನ ಶೈಲಿಯ “ಪ್ರೊ ಲುಡೋ ಸ್ಟಾರ್ ಲೀಗ್”

ಆಕ್ಷನ್ ಪ್ಯಾಕ್ಡ್ ಸಂಬರಾಲ ಏಟಿಗಟ್ಟು ಟೀಸರ್ ನಲ್ಲಿ ಸಾಯಿ ದುರ್ಗಾ ತೇಜ್
ಸಿಕ್ಸ್ ಪ್ಯಾಕ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಅಭಿಮಾನಿಗಳು ಮತ್ತು ಪ್ರೇಕ್ಷಕರನ್ನು ಬೆರಗುಗೊಳಿಸಿದೆ. ಭರ್ಜರಿ ಆಕ್ಷನ್ ಮೂಲಕ ಅಬ್ಬರಿಸಿರುವ ಅವರು ರಕ್ತಸಿಕ್ತ ಇತಿಹಾಸ ಕಥೆಯೊಂದಿಗೆ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

ಯುವ ಪ್ರತಿಭೆ ರೋಹಿತ್ ಕೆ ಪಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ವೆಟ್ರಿವೇಲ್ ಪಳನಿಸ್ವಾಮಿ ಛಾಯಾಗ್ರಹಣ, ಬಿ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ನವೀನ್ ವಿಜಯಕೃಷ್ಣ ಸಂಕಲನ ಸಂಬರಾಲ ಏಟಿಗಟ್ಟು ಚಿತ್ರಕ್ಕಿದೆ. ಈ ವರ್ಷ ಹನುಮಾನ್ ನಂತಹ ಹಿಟ್ ಕೊಟ್ಟಿರುವ ಕೆ ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಪ್ರೈಮ್ ಶೋ ಎಂಟರ್ ಟೈನ್ಮೆಂಟ್ ನಡಿ ಸಿನಿಮಾ ನಿರ್ಮಿಸುತ್ತಿದ್ದಾರೆ. ತೆಲುಗು , ಕನ್ನಡ, ಮಲಯಾಳಂ, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಚಿತ್ರ ಮುಂದಿನ ವರ್ಷದ ಸೆಪ್ಟೆಂಬರ್ 25ಕ್ಕೆ ಬಿಡುಗಡೆಯಾಗಲಿದೆ.

Share this post:

Translate »