ʻನೂರು ಜನ್ಮಕೂʼ ಧಾರಾವಾಹಿ ಪ್ರಸಾರದ ಡೇಟ್ ಅನೌನ್ಸ್ : ಡಿ.23ಕ್ಕೆ ನಿಮ್ಮ ಟಿವಿಯಲ್ಲಿ
ಒಂದಾದ ಮೇಲೊಂದು ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿಸೆಂಬರ್ 23ರಿಂದ ಪ್ರತಿ ರಾತ್ರಿ 8:30ಕ್ಕೆ ಪ್ರಸಾರಗೊಳ್ಳಲಿರುವ ಹೊಸ ಧಾರಾವಾಹಿ ‘ನೂರು ಜನ್ಮಕೂ’ ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ. ಮೊದಲ ನೋಟಕ್ಕೆ ‘ನೂರು ಜನ್ಮಕೂ’ ಒಂದು ಉತ್ಕಟ ಪ್ರೇಮಕತೆ, ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕತೆಯಿದು. ಚಿರಂಜೀವಿ ಅತಿಮಾನುಷ ಶಕ್ತಿಗಳ ಹಿಡಿತಕ್ಕೆ […]