ಶಿವರಾಜಕುಮಾರ್ ರಿಂದ ಬಿಡುಗಡೆಯಾಯಿತು “ಕಾಲಾಪತ್ಥರ್” ಚಿತ್ರದ ಟ್ರೇಲರ್
ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಶಿವರಾಜಕುಮಾರ್ ಅವರು, “ಕಾಲಾಪತ್ಥರ್” ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಈ ಚಿತ್ರ ಖಂಡಿತ ಸೂಪರ್ ಹಿಟ್ ಆಗಲಿದೆ ಎಂದು ಹಾರೈಸಿದರು. ನಾನು ನಟ ಆಗಬೇಕೆಂದುಕೊಂಡವನಲ್ಲ. […]