ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಯಶ್ ಸ್ನೇಹಿತರು
ರಾಕಿಂಗ್ ಸ್ಟಾರ್ ಯಶ್ ಬರ್ತ್ಡೇ ದಿನ ಫ್ಲೆಕ್ಸ್ ಕಟ್ಟಲು ಹೋಗಿ ಕರೆಂಟ್ ಶಾಕ್ ತಗುಲಿ ಮೃತಪಟ್ಟ ಯಶ್ ಅಭಿಮಾನಿಗಳು ಕುಟುಂಬಕ್ಕೆ ನಟನ ಸ್ನೇಹಿತರು ಪರಿಹಾರದ ಚೆಕ್ ತಲುಪಿಸಿದ್ದಾರೆ. ಯಶ್ ಸ್ನೇಹಿತರಾದ ರಾಕೇಶ್, ಚೇತನ್ ಹಾಗೂ ಗದಗ ಜಿಲ್ಲೆಯ ಯಶ್ ಅಭಿಮಾನಿ ಬಳಗದ ಅಧ್ಯಕ್ಷ ಮಂಜುನಾಥ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಮೃತ ಮೂವರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದ್ದಾರೆ. ಮೃತಪಟ್ಟ ಹನಮಂತ ಹರಿಜನ (21), ಮುರಳಿ ನಡವಿನಮನಿ (20) ನವೀನ್ […]