ನಟ ಗೋವಿಂದ ಅಚಾನಕ್ ಕುಸಿದು ಜುಹು ಆಸ್ಪತ್ರೆಗೆ ದಾಖಲು
ಬಾಲಿವುಡ್ ಈಗ ಮತ್ತೊಂದು ಆಘಾತಕರ ಸುದ್ದಿಯಲ್ಲಿದೆ. ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇದೀಗ ಜನಪ್ರಿಯ ನಟ ಗೋವಿಂದ ಸಹ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ತಮ್ಮ ನಿವಾಸದಲ್ಲಿ ಮಂಗಳವಾರ (ನವೆಂಬರ್ 11) ರಾತ್ರಿ ಗೋವಿಂದ ಅಚಾನಕ್ ಕುಸಿದು ಬಿದ್ದರು. ತಕ್ಷಣ ಅವರನ್ನು ಜುಹು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಆಪ್ತ ಹಾಗೂ ಕಾನೂನು ಸಲಹೆಗಾರ ಲಲಿತ್ ಬಿಂದಲ್ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ, ಗೋವಿಂದರನ್ನು ತುರ್ತು ಚಿಕಿತ್ಸೆ ಘಟಕದಲ್ಲಿ ಇರಿಸಿ ಚಿಕಿತ್ಸೆ […]