# Tags

ಧ್ರುವ ಸರ್ಜಾ ಹುಟ್ಟುಹಬ್ಬದ ದಿನ ನಿರ್ಮಾಪಕ ಉಮಾಪತಿ ಗೌಡ ಹೊಸ ಸಿನಿಮಾ ಘೋಷಣೆ

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ 37ನೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಬೆಂಗಳೂರು ಕೆ.ಆರ್. ರಸ್ತೆಯ ತಮ್ಮ ನಿವಾಸದ ಮುಂದೆ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಧ್ರುವ ಸರ್ಜಾ ಅವರ ಹುಟ್ಟುಹಬ್ಬದ ಸಂಭ್ರಮ ಸುತ್ತಮುತ್ತಲಿನ ಪ್ರದೇಶವನ್ನೇ ಉತ್ಸವದ ವಾತಾವರಣಕ್ಕೆ ತಲುಪಿಸಿತ್ತು. ಅಭಿಮಾನಿಗಳು ತಮ್ಮ ಪ್ರೀತಿಯ ನಟನ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ, ಅನ್ನದಾನ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ದಾನ ಸೇರಿದಂತೆ ಹಲವಾರು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ದೂರದೂರಿನಿಂದ ಆಗಮಿಸಿದ್ದ ಅಭಿಮಾನಿಗಳು, ಆಪ್ತರು ಹಾಗೂ ಕುಟುಂಬಸ್ಥರು ಧ್ರುವ […]

ದೈವಿಕ ಕಥಾಹಂದರದ ‘ಕಾಂತಾರ: ಚಾಪ್ಟರ್ 1’ ಅಕ್ಟೋಬರ್ 2ರಂದು ಅದ್ಧೂರಿ ಬಿಡುಗಡೆಗೆ ಸಜ್ಜು

ಹೊಂಬಾಳೆ ಫಿಲಮ್ಸ್ ನಿರ್ಮಾಣದಲ್ಲಿ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಪ್ರೇಕ್ಷಕರ ಎದುರು ಬರಲು ಸಜ್ಜಾಗಿದೆ. ಇತ್ತೀಚೆಗಷ್ಟೆ ಹೊಸ ಪೋಸ್ಟರ್ ಬಿಡುಗಡೆ ಮಾಡಿದ ಚಿತ್ರತಂಡ, ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಬಹು ನಿರೀಕ್ಷಿತ ಈ ಸಿನಿಮಾ ಅಕ್ಟೋಬರ್ 2ರಂದು ಬಿಡುಗಡೆಯಾಗಲಿದೆ. ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿರುವ ಕಾರಣ, ಶೀಘ್ರದಲ್ಲೇ ಅದ್ಧೂರಿ ಪ್ರೀ-ರಿಲೀಸ್ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಹೊಂಬಾಳೆ ಫಿಲಮ್ಸ್ ಭಾರಿ ಬಜೆಟ್‌ನಲ್ಲಿ ಸಿನಿಮಾ ಸಜ್ಜು ಮಾಡುತ್ತಿದ್ದು, ಪ್ರೇಕ್ಷಕರಿಗೆ ಪೂರ್ಣ ಪ್ರಮಾಣದ ಸಿನಿಮಾ ಅನುಭವ ನೀಡಲು […]

WhatsApp Image 2025-09-17 at 12.01.09 PM

ಹೊಸ ಪ್ರತಿಭೆಗಳ ಸಿನಿಮಾ ‘ಖಾಲಿ ಡಬ್ಬ’ – ಶೀಘ್ರದಲ್ಲೇ ತೆರೆಗೆ

ಹೊಸಬರ ಪ್ರಯತ್ನದ ಖಾಲಿ ಡಬ್ಬ ಸಿನಿಮಾ ಇದೇ ಶುಕ್ರವಾರ ತೆರೆಗೆ ಬರ್ತಿದೆ. ಈ ಕುರಿತ ಸುದ್ದಿಗೋಷ್ಟಿಯನ್ನು ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಿನ್ನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿನಿಮಾ ಬಿಡುಗಡೆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನಿರ್ದೇಶಕ ಪ್ರಕಾಶ್ ಕೆ ಅಂಬ್ಳೆ ಮಾತನಾಡಿ, ಪಾತ್ರದೊಳಗಿನ ಪಾತ್ರಧಾರಿ ಅಂದರೆ ಅದು ಖಾಲಿ ಡಬ್ಬ. ಖಾಲಿ ಡಬ್ಬದಲ್ಲಿ ಒಂದಷ್ಟು ವಿಶೇಷ ಇರುತ್ತದೆ. ಅದನ್ನು ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ಈ ಸಿನಿಮಾ ರಿಲೀಸ್ ವರೆಗೂ ಬರಲು ಕಾರಣ ನಿರ್ಮಾಪಕ ಮಂಜು ಗುರಪ್ಪ. […]

ಅರಾಜಕತೆ ವಿರುದ್ದ ಸಿಡಿದುನಿಂತ ಕೋಟೆನಾಡಿನ “ಭಲೆ ಹುಡುಗ”

ಭರತ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ರವಿಚಂದ್ರ ಹಾಗೂ ಭೀಮರಾಜ್ ಅವರು ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ನೂತನ ಚಿತ್ರ ಭಲೆ ಹುಡುಗ. ಹಳ್ಳಿಯ ಜನರಲ್ಲಿ ಜಾಗೃತಿ ಮೂಡಿಸುವ ಹುಡುಗನೊಬ್ಬನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚಿತ್ರದುರ್ಗದ ಎಂ.ನಿಂಗರಾಜು ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಬುದ್ದಿವಂತ ಮಕ್ಕಳು ಹಾಗೂ ಹಳ್ಳಿಯ ಜನರ ಸುತ್ತ ನಡೆಯುವ ಕಥಾಹಂದರ ಹೊಂದಿರುವ ಭಲೆ ಹುಡುಗ ಚಿತ್ರದಲ್ಲಿ ನಿರ್ದೇಶಕ ನಿಂಗರಾಜು ಅವರ ಪುತ್ರ ಶರತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬರುವ ಅಕ್ಟೋಬರ್ […]

Translate »