# Tags

ಅಮೆರಿಕದ ಕಡಲ ಕಿನಾರೆಯಲ್ಲಿ ಶಿವಣ್ಣ & ಗೀತಕ್ಕ ಓಡಾಟ

ಚಿಕಿತ್ಸೆಗೆಂದು ಅಮೆರಿಕಗೆ ಹೋಗಿರುವ ಶಿವಣ್ಣ ಅವರು ಚೇತರಿಸಿಕೊಳ್ತಿದ್ದಾರೆ. ಶಿವಣ್ಣ ಅಭಿಮಾನಿಗಳು ಖುಷಿಯಾಗುವಂತಹ ಮಾಹಿತಿಯನ್ನು ಗೀತಾ ಶಿವರಾಜ್​ಕುಮಾರ್ ಹಂಚಿಕೊಂಡಿದ್ದಾರೆ.ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಶಿವಣ್ಣ ಅವರು ತಾವು ಉಳಿದುಕೊಂಡಿರುವ ನಿವಾಸದ ಹತ್ತಿರ ಇರುವ ಬೀಚ್​​​ಗೆ ಭೇಟಿ ನೀಡಿದ್ದಾರೆ. ಅಲ್ಲಿ ವಾಯುವಿಹಾರ ನಡೆಸಿ ಕುಟುಂಬದ ಜೊತೆ ಕಾಲ ಕಳೆದಿದ್ದಾರೆ. ಆ ಕ್ಷಣವನ್ನು ಗೀತಕ್ಕ ತಮ್ಮ ಮೊಬೈಲ್​​ನಲ್ಲಿ ಸೆರೆ ಹಿಡಿದಿದ್ದಾರೆ. ಕೆಲವು ಫೋಟೋಗಳನ್ನು ಅಭಿಮಾನಿಗಳ ಜೊತೆ ಗೀತಕ್ಕ ಹಂಚಿಕೊಂಡಿದ್ದಾರೆ. ಶಿವಣ್ಣ ಕೂಡ ಗೀತಕ್ಕ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಶಿವಣ್ಣ ಅವರಿಗೆ ಕ್ಯಾನ್ಸರ್​​ ಕಾಡಿತ್ತು. […]

‘ಫೈರ್ ಫ್ಲೈ’ ನಾಯಕ ವಂಶಿ ಇಂಟ್ರೂಡಕ್ಷನ್ ಟೀಸರ್ ಅನಾವರಣ

‘ಫೈರ್‌ ಫ್ಲೈ’ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾ. ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಈ ಚಿತ್ರದ ಮೊದಲ ಝಲಕ್ ರಿಲೀಸ್ ಆಗಿದೆ. ವಿಕ್ಕಿಯಾಗಿ ನಾಯಕ ವಂಶಿಯನ್ನು ಫೈರ್ ಫ್ಲೈ ಬಳಗ ಸಿನಿಮಾಪ್ರೇಮಿಗಳಿಗೆ ಪರಿಚಯಿಸಿದೆ. ವಿವೇಕಾನಂದ ಎಂದು ಪರಿಚಯಿಸಿಕೊಳ್ಳುವ ನಾಯಕ ತಾನೊಬ್ಬ ಅವಾರ್ಡ್ ವಿನ್ನಿಂಗ್ ಮ್ಯಾಥ್ಸ್ ಟೀಚರ್ ಎಂದು ಹೇಳಿಕೊಳ್ಳುತ್ತಾನೆ. ವಿಕ್ಕಿ ಪ್ರಪಂಚದಲ್ಲಿ ಬೆಳಿಗ್ಗೆ 7, ಮಧ್ಯಾಹ್ನ 1 ಮತ್ತು ರಾತ್ರಿ 8 ಗಂಟೆಗೆ ಏನ್ ನಡೆಯುತ್ತದೆ. ವಿಕ್ಕಿ […]

Translate »