“ಕಾಂತಾರ ಭಾರತೀಯ ಸಿನಿಮಾದ ಇತಿಹಾಸದಲ್ಲಿ ಹೊಸ ಮೈಲಿಗಲ್ಲು” : ಯಶ್
ಹೊಂಬಾಳೆ ಫಿಲಮ್ಸ್ ನಿರ್ಮಾಣದ ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ನಿನ್ನೆ ಬಿಡುಗಡೆಯಾಗಿ ಪ್ರೇಕ್ಷಕರ ಮನಸೂರೆಗೊಂಡಿದೆ. ಸಾಮಾನ್ಯ ಅಭಿಮಾನಿಗಳಷ್ಟೇ ಅಲ್ಲ, ಚಿತ್ರರಂಗದ ಸೆಲೆಬ್ರಿಟಿಗಳೂ ಸಹ ಈ ಚಿತ್ರವನ್ನು ಮೆಚ್ಚಿ ಶ್ಲಾಘಿಸುತ್ತಿದ್ದಾರೆ. ಈಗಾಗಲೇ ಪ್ರಭಾಸ್, ಜೂ.ಎನ್‌ಟಿಆರ್, ಸಂದೀಪ್ ರೆಡ್ಡಿ ವಂಗಾ ಮೊದಲಾದವರು ತಮ್ಮ ಪ್ರತಿಕ್ರಿಯೆ ಹಂಚಿಕೊಂಡಿದ್ದರು. ಇತ್ತೀಚೆಗೆ ಕನ್ನಡದ ಪ್ಯಾನ್ ಇಂಡಿಯಾ ಸೂಪರ್‌ಸ್ಟಾರ್ ಯಶ್, ಪತ್ನಿ ರಾಧಿಕಾ ಪಂಡಿತ್ ಜೊತೆ ಚಿತ್ರ ವೀಕ್ಷಿಸಿ ತಮ್ಮ ಅನಿಸಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ. ಯಶ್ ತಮ್ಮ ಬರಹದಲ್ಲಿ, “ಕಾಂತಾರ: ಚಾಪ್ಟರ್ 1 ಭಾರತೀಯ […]
 
        