ನಂದಿ ಬೆಟ್ಟದಲ್ಲಿ ಆರಂಭವಾದ ‘ಡ್ಯಾಡ್’ ಚಿತ್ರದ ಎರಡನೇ ಹಂತದ ಶೂಟಿಂಗ್
ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಡ್ಯಾಡ್” ಚಿತ್ರಕ್ಕೆ ಇತ್ತೀಚೆಗಷ್ಟೇ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿತ್ತು. ಈಗ ಎರಡನೇ ಹಂತದ ಚಿತ್ರೀಕರಣ ನಂದಿ ಬೆಟ್ಟದಲ್ಲಿ ನಡೆಯತ್ತಿದೆ. ಶಿವರಾಜಕುಮಾರ್, ಬೇಬಿ ನಕ್ಷತ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಹರೀಶ್ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ […]