ಕ್ರೇಜಿಸ್ಟಾರ್ ಪುತ್ರನಿಗೆ ಸಲಗ ಸುಂದರಿ ನಾಯಕಿ..ವಿಕ್ರಮ್ ‘ಮುಧೋಳ್’ ಬಳಗ ಸೇರಿದ ಸಂಜನಾ ಆನಂದ್
ಸಹಜ ಅಭಿನಯ, ಸರಳ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಕಡಿಮೆ ಅವಧಿಯಲ್ಲಿ ಸ್ಟಾರ್ ಹೀರೋ ಜೊತೆ ತೆರೆಹಂಚಿಕೊಳ್ಳುವ ಅವಕಾಶಗಿಟ್ಟಿಸಿಕೊಂಡರು. ದುನಿಯಾ ವಿಜಯ್ ಸಾರಥ್ಯದ ಸಲಗ ಮೂಲಕ ಸೆನ್ಸೇಷನ್ ಸೃಷ್ಟಿಸಿದ್ದ ಈ ಬ್ಯೂಟಿ ಟಾಲಿವುಡ್ ಕೂಡ ಪ್ರವೇಶಿಸಿದ್ದಾರೆ. ಕನ್ನಡದ ಜೊತೆಗೆ ತೆಲುಗು ಅಂಗಳದಲ್ಲಿಯೂ ಬ್ಯುಸಿಯಾಗಿರುವ ಸಂಜನಾ ಆನಂದ್ ಈಗ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಜೊತೆ […]