Sandalwood Leading OnlineMedia

ವಿಶ್ವಕಪ್ ಕ್ರಿಕೆಟ್: ಫೈನಲ್ ನಲ್ಲಿ ಭಾರತ ಗೆದ್ದರೆ ಬೀಚ್ ನಲ್ಲಿ ಬೆತ್ತಲೆಯಾಗಿ ಓಡುವೆ ಎಂದ ತೆಲುಗು ನಟಿ

ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಈಗಾಗಲೇ ಫೈನಲ್ ಪ್ರವೇಶಿಸಿರುವ ಭಾರತ ತಂಡ ಗೆದ್ದರೆ ವಿಶಾಖಪಟ್ಟಣಂ ಬೀಚ್ ನಲ್ಲಿ ಬೆತ್ತಲೆಯಾಗಿ ಓಡುವುದಾಗಿ ತೆಲುಗಿನ ನಟಿಯೊಬ್ಬರು ಹೇಳಿಕೆ ನೀಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗುತ್ತಿದ್ದಾರೆ.

ಇದನ್ನೂ ಓದಿ  ʼಸಿಲ ನೋಡಿಗಳಿಲ್ʼ ತಮಿಳು ಚಿತ್ರಕ್ಕೆ ನಟಿ ಶರ್ಮಿಳಾ ಮಾಂಡ್ರೆ ಸಾರಥ್ಯ..!

ಹೌದು. ನಟಿ ರೇಖಾ ಬೊಜ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ರೀತಿಯ ಟ್ವೀಟ್ ಮಾಡುವ ಮೂಲಕ ನೆಟ್ಟಿಗರ ಗಮನ ಸೆಳೆದಿದ್ದಾರೆ. ಈ ಟ್ವೀಟಿಗೆ ನಾನಾ ರೀತಿಯಲ್ಲಿ ಅನೇಕ ಮಂದಿ ಕಾಮೆಂಟ್ ಮಾಡಿದ್ದಾರೆ. 12 ವರ್ಷಗಳ ಹಿಂದೆ ಬಾಲಿವುಡ್ ನಟಿ ಪೂನಂ ಪಾಂಡೆ, ಇಂತಹುದೇ ಹೇಳಿಕೆ ನೀಡುವ ಮೂಲಕ ಪ್ರಸಿದ್ಧಿಯಾಗಿದ್ದರು. ಭಾರತ ತಂಡ ವಿಶ್ವಕಪ್ ಗೆದ್ದರೆ ಮುಂಬೈ ಬೀದಿಗಳಲ್ಲಿ ಬೆತ್ತಲೆಯಾಗಿ ಓಡಾಡುತ್ತೇನೆ ಎಂದು ಹೇಳಿ ಪ್ರಚಾರ ಪಡೆದಿದ್ದರು. ಇದೀಗ ಅದೇ ರೀತಿಯಲ್ಲಿ ರೇಖಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ ಬಗ್ಗೆ  ಪ್ರತಿಕ್ರಿಯಿಸಿದ ರಕ್ಷಿತ್ ಶೆಟ್ಟಿ 
ಅಂದಹಾಗೆ, ರೇಖಾ ‘ಮಾಂಗಲ್ಯಂ’, ‘ಸ್ವಾತಿ ಚಿನುಕು’, ‘ರಂಗೀಲಾ ಸೇರಿದಂತೆ ತೆಲುಗಿನ ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಯಾವುದೇ ಸಿನಿಮಾ ಹಿಟ್ ಆಗಲಿಲ್ಲ. ಆಕೆಗೆ ಹೆಟ್ಟಿ ಅವಕಾಶಗಳು ಮಾತ್ರ ಸಿಗುತ್ತಿಲ್ಲ. ಆದರೆ ಸೋಶಿಯಲ್ ಮೀಡಿಯಾದಲ್ಲಿ ವಿವಾದಾತ್ಮಕ ಹೇಳಿಕೆಗಳಿಂದ ಬಿಟ್ಟಿ ಪ್ರಚಾರ ಗಿಟ್ಟಿಸುವ ಕೆಲಸ ಮುಂದುವರೆಸಿದ್ದಾರೆ.

 

Share this post:

Translate »